– ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ
ಬೆಂಗಳೂರು: ಭ್ರಷ್ಟಾಚಾರ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
Advertisement
ಮೌನ ಪ್ರತಿಭಟನೆ ನಡೆಸಿದ ಕೋಟಾ ಶ್ರೀನಿವಾಸ್ ಪೂಜಾರಿಗೆ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಸುರೇಶ್ ಕುಮಾರ್, ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಶಾಂತರಾಮ್ ಸಿದ್ದಿ ಸಾಥ್ ನೀಡಿದರು. ನನ್ನ ಮೇಲೆ ಆರೋಪ ಹಿಂಪಡೆಯಿರಿ, ಇಲ್ಲವೇ ಸಿಬಿಐ ತನಿಖೆಗೆ ಕೊಡಿ ಎಂದು ಆಗ್ರಹಿಸಿ ಭಿತ್ತಿ ಪತ್ರ ಪ್ರದರ್ಶನದ ಮೂಲಕ ಮೌನವಾಗಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ
Advertisement
Advertisement
ಇನ್ನು ಪ್ರತಿಭಟನೆ ಬಳಿಕ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಒಂದು ವಾರದ ಕೆಳಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಸದನದ ಒಳಗೆ, ಹೊರಗೂ ಪ್ರಸ್ತಾಪ ಮಾಡಿದ್ದರು. ನಾನು ಯಾವುದೇ ಖಾತೆ ನಿಭಾಯಿಸಿದ್ದರೂ 1 ರೂ. ಭ್ರಷ್ಟಾಚಾರ ಮಾಡಿಲ್ಲ. ಒಂದು ವೇಳೆ ಭ್ರಷ್ಟಾಚಾರ ಮಾಡಿದ್ದರೇ ಸಿಬಿಐಗೆ ವಹಿಸಿ ಎಂದು ಪತ್ರ ಬರೆದಿದ್ದೆ. ಸಿಬಿಐಗೆ ವಹಿಸದಿದ್ದರೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದೆ. ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ನಿನ್ನೆಯೂ ಮತ್ತೊಂದು ಪತ್ರ ಸಿಎಂಗೆ ಬರೆದಿದ್ದೇನೆ ಎಂದರು. ಇದನ್ನೂ ಓದಿ: ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ
Advertisement
ಸದನದ ಒಳಗೆ ನಿಂತು ನನ್ನನ್ನು ನಾನು ಸಮರ್ಥಿಸಿಕೊಳ್ಳಲು ಅವಕಾಶ ಇಲ್ಲ. ನಾನು ಸಂಸದನಾದ ಕಾರಣ ಇದು ಸಾಧ್ಯವಾಗಲಿಲ್ಲ. ನನ್ನ ಮೇಲೆ ಮಾಡಿರುವ ಆರೋಪವನ್ನು ಹಿಂಪಡೆಯಬೇಕು, ಇಲ್ಲವಾದರೆ ಸಿಬಿಐ ತನಿಖೆಗೆ ವಹಿಸುವಂತೆ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದರು. ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಯೋಚನೆ ಮಾಡಿ ತೀರ್ಮಾನಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್