ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ರವಿಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭೋವಿ ನಿಗಮದಲ್ಲಿ 60% ಕಮಿಷನ್, ಅಧ್ಯಕ್ಷರಿಂದಲೇ ಬೇಡಿಕೆ – ವಿಡಿಯೋ ರಿಲೀಸ್
ಆರೋಪ ಏನು?
ಸಿದ್ದರಾಮಯ್ಯ (Siddaramaiah) 65 ಕೋಟಿ ರೂ.ಗಳನ್ನು ಭೋವಿ ಸಮಾಜಕ್ಕೆ ಘೋಷಣೆ ಮಾಡಿದ್ದಾರೆ. ಆದರೆ ಕೇವಲ 13 ಕೋಟಿ ರೂ. ಬಿಡುಗಡೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್ (Ravikumar) ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರು ಭೋವಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ ನಿಗಮದ ಅಧ್ಯಕ್ಷರೇ ಬ್ರೋಕರ್ ಜೊತೆಗೆ 60% ಕಮಿಷನ್‌ಗೆ ಬೇಡಿಕೆ ಇಟ್ಟಿರುವ ವಿಡಿಯೋ ಸಿಕ್ಕಿದೆ ಎಂದು ದೂರಿದ್ದರು.