ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ ಮುಂದೆ ಶವವನ್ನು ಇರಿಸಿ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ.
ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್‍ನಿಂದ ಮೋಸವಾಗಿದೆ ಎಂದು ಆರೋಪಿಸಿ ಗ್ರಾಹಕರೊಬ್ಬರ ಶವವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಸುಮಾರು ನಾಲ್ಕು ಕೋಟಿಗೂ ಅಧಿಕ ಠೇವಣಿ ಹಣವನ್ನು ಬ್ಯಾಂಕ್ ದುರುಪಯೋಗ ಮಾಡಿಕೊಂಡಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.
Advertisement
Advertisement
ತಮ್ಮಯ್ಯ ಬನಶೆಟ್ಟಿ ಎಂಬುವವರು ರೇಣುಕಾಚಾರ್ಯ ಬ್ಯಾಂಕಿನಲ್ಲಿ ಹಣ ಕೂಡಿಸಿಟ್ಟಿದ್ದರು. ಆದರೆ ತಮ್ಮಯ್ಯ ಅವರು ಕಟ್ಟಿದ್ದ ಹಣವನ್ನು ಹಿಂಪಡೆಯಲು ಬ್ಯಾಂಕ್‍ಗೆ ಹೋಗಿದ್ದರು. ಈ ವೇಳೆ ಬ್ಯಾಂಕ್ ಸಿಬ್ಬಂದಿ ಅವರಿ ಹಣ ನೀಡಲು ನಿರಾಕರಿಸಿದ್ದಾರೆ. ತಾವು ಕೂಡಿಸಿಟ್ಟಿದ್ದ ಹಣ ಸಿಗದಿದ್ದಕ್ಕೆ ತಮ್ಮಯ್ಯ ಮನನೊಂದು ಅನಾರೋಗ್ಯಕ್ಕಿಡಾಗಿದ್ದರು.
Advertisement
ಕೊನೆಗೆ ಚಿಕಿತ್ಸೆ ಪಡೆಯಲು ಕೂಡ ಹಣವಿಲ್ಲದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ಕೋಪಗೊಂಡ ತಿಮ್ಮಯ್ಯ ಅವರ ಕುಟುಂಬಸ್ಥರು ಠೇವಣಿಯ ಹಣ ಕೊಡುವಂತೆ ಒತ್ತಾಯಿಸಿ ಸಹಕಾರಿ ಬ್ಯಾಂಕ್ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv