ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಬ್ಯಾನ್?-ನಾಳೆ ಅಧಿಕೃತ ಆದೇಶ ಸಾಧ್ಯತೆ

Public TV
1 Min Read
Cotton Candy Gobi Manchuri

ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ (Gobi Manchurian) ಬ್ಯಾನ್ ಆಗುತ್ತಾ..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ನಾಳೆ (ಸೋಮವಾರ) ಹೊರಬೀಳುವ ಸಾಧ್ಯತೆ ಇದೆ.

ಹೊರರಾಜ್ಯಗಳಲ್ಲಿ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಬ್ಯಾನ್ ಆಗಿದೆ. ಕಾರಣ ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಆಹಾರ ಮತ್ತು ಸುರಕ್ಷತಾ ಇಲಾಖೆ ಹೋಟೆಲ್, ಬೀದಿಬದಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ಬಳಿ ಕಾಂಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹಿಸಿ ಟೆಸ್ಟ್ ಮಾಡಿದೆ. ಈ ಟೆಸ್ಟ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ರಂಡೋಮನ್ ಬಿ ಅಂಶ ಇರೋದು ಪತ್ತೆಯಾಗಿದೆ. ಜೊತೆಗೆ ಗೋಬಿ ಮಂಚೂರಿಗೆ ಹಾಕುವ ಕಲರ್ ಜಲ್ಲಿಗಳನ್ನ ಟೌನ್ ಟೆಸ್ಟ್ ಗೆ ಒಳಪಡಿಸಿದಾಗ ಅದರಲ್ಲೂ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಬ್ಯಾನ್ ಮಾಡುವ ಸಾಧ್ಯತೆ ಇದೆ.

ಕೃತಕ ಬಣ್ಣ ಬೆರಸಿ ಗೋಬಿ ಮಾಡುವುದಕ್ಕೆ ಅವಕಾಶ ಇಲ್ಲ. ಆಹಾರ ಸುರಕ್ಷತೆ ಕಾಯ್ದೆಯಡಿ 10 ಲಕ್ಷದ ವರೆಗೂ ದಂಡ ವಿಧಿಸುವ ಸಂಭವ ಇದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ. ಇದನ್ನೂ ಓದಿ: Lok Sabha: ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ 9 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ

ಒಟ್ಟಾರೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಅಂಶ ಇರೋದು ವರದಿಯಲ್ಲಿ ಕನ್ಫರ್ಮ್ ಆಗಿದ್ದು ಆರೋಗ್ಯ ಸಚಿವರಿಗೆ ವರದಿ ಕೈ ಸೇರಿದೆ. ಆರೋಗ್ಯ ಸಚಿವರು ಕಾಟನ್ ಕ್ಯಾಂಡಿ ಬ್ಯಾನ್ ಮಾಡಿ ಗೋಬಿ ಮಂಚೂರಿಗೆ ಬಳಸೋ ಪದಾರ್ಥಗಳಿಗೆ ಪ್ರತ್ಯೇಕ ಗೈಡ್ ಲೈನ್ಸ್ ಬಿಡುಗಡೆ ಮಾಡ್ತಾರಾ ಕಾದು ನೋಡಬೇಕಿದೆ.

Share This Article