ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ (Dakshina Kannada and Udupi) ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ (Council bypolls) ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು (Kishor Kumar Puttur )ಅವರು 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಕಿಶೋರ್ ಅವರು 3,655 ಮತ ಪಡೆದರೆ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ 1,958 ಮತ ಗಳಿಸಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ, ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದರು. ಒಟ್ಟು 87 ಮತಗಳು ತಿರಸ್ಕೃತಗೊಂಡವು. ಚಲಾವಣೆಯಾದ ಒಟ್ಟು 5,907 ಮತಗಳ ಪೈಕಿ 5,819 ಸಿಂಧು ಮತಗಳಿದ್ದವು.
Advertisement
ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಮತ ಎಣಿಕೆ ನಡೆಯಿತು. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ : 5 ಕೋಟಿ ಬೇಡಿಕೆಯಿಟ್ಟಿದ್ದ ತರಕಾರಿ ಮಾರಾಟಗಾರ ಅರೆಸ್ಟ್
Advertisement
Advertisement
ಚಿಕ್ಕಮಗಳೂರು-ಉಡುಪಿ ಲೋಕಸಭಾ ಸದಸ್ಯರಾಗಿ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನ ಭರ್ತಿಗಾಗಿ ಅ.21 ರಂದು ಉಪ ಚುನಾವಣೆ ನಡೆದಿತ್ತು.
Advertisement
ಡಿಸೆಂಬರ್ 2021 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 3,672 ಮತ, ಮಂಜುನಾಥ ಭಂಡಾರಿ 2,079 ಮತ, ಎಸ್‌ಡಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು.