ಹುಬ್ಬಳ್ಳಿ: ಯಾವುದೇ ಪಕ್ಷ ಇರಲಿ, ಯಾವುದೇ ಸರ್ಕಾರ ಇರಲಿ ಶಿಕ್ಷಕರ ವಿಚಾರ ಬಂದಾಗ ಹೊರಟ್ಟಿ ಕಾಂಪ್ರಮೈಸ್ ಆಗಲ್ಲ, ಬಸವರಾಜ ಹೊರಟ್ಟಿ ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಪಿಹೆಚ್‍ಡಿ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಹಿನ್ನಲೆ, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ, ಆದರ್ಶ ನಗರದ ರೋಟರಿ ಶಾಲೆಯ ಸಭಾಂಗಣದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ, ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆ ತಂದಿದೆ. ಇದನ್ನು ಚೆನ್ನಾಗಿ ಅರಿತು ಶಿಕ್ಷಕರಿಗೆ ಮತ್ತು ಶಿಕ್ಷಣಕ್ಕೆ ನ್ಯಾಯ ನೀಡುವ ನಿಟ್ಟಿನಲ್ಲಿ ಹೊರಟ್ಟಿ ಬಿಜೆಪಿ ಸೇರಿದ್ದಾರೆ. ಅವರ ಅನುಭವಕ್ಕೆ ಗೌರವ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡಿದ್ದೇವೆ. ಈ ಕ್ಷೇತ್ರದಲ್ಲಿ ಅವರಿಗೆ ಯಾವುದೇ ವಿರೋಧವಿಲ್ಲ. ಅವರು ಈ ಬಾರಿ ಗೆಲುವಿನ ದಾಖಲೆ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಭಕ್ತಿ ತುಂಬಿರುವ RSS ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಂಘಟನೆ: ಬೊಮ್ಮಾಯಿ
Advertisement
Advertisement
ವಿರೋಧ ಪಕ್ಷದವರು ಚುನಾವಣೆ ಮಾಡಬೇಕು ಅಂತ ಚುನಾವಣೆ ಮಾಡುತ್ತಿದ್ದಾರೆ. ಈ ಕ್ಷೇತ್ರದ ಬಗ್ಗೆ ಅರಿವಿಲ್ಲದವರು ಬಂದು ಇಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಕ್ಷೇತ್ರದ ಶಿಕ್ಷಕರ ಸಮಸ್ಯೆ ಬಗ್ಗೆ ಅವರಿಗೇನು ಗೊತ್ತಿಲ್ಲ ಎಂದು ಪರೋಕ್ಷವಾಗಿ ರಾಜ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಸಿಎಂ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: RSS ಚಡ್ಡಿ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶ: ಭೈರತಿ ಬಸವರಾಜ್