ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

Public TV
1 Min Read
vivekananda JDS

– ಸಿಎಂ ತವರಲ್ಲಿ ಕಾಂಗ್ರೆಸ್‌ ಧೂಳೀಪಟ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ (South Teachers Constituency) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಹೀನಾಯ ಸೋಲನುಭವಿಸಿದ್ದು, ಸಿಎಂಗೆ ಮತ್ತೊಮ್ಮೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ.

4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ವಿವೇಕಾನಂದ ಗೆದ್ದಿದ್ದಾರೆ. ವಾಟಾಳ್ ನಾಗರಾಜ್‌ಗೆ ಕೇವಲ 84 ಮತಗಳು ಸಿಕ್ಕಿವೆ. 1,049 ಮತಗಳು ಅಸಿಂಧುವಾಗಿದೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

MND JDS MLC mari tibbe gowda

ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದೆ. ಮೊನ್ನೆ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯಕವಾಗಿ ಸೋಲು ಕಂಡಿತ್ತು. ಇಂದು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿದ್ದ ಜೆಡಿಎಸ್‌ನ (JDS) ಕೆ.ವಿವೇಕಾನಂದಗೆ ಭರ್ಜರಿ ಗೆಲುವು ಸಿಕ್ಕಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮೈತ್ರಿ ಪಕ್ಷ ಗೆಲವು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಗೆಲುವಿನ ನಾಗಾಲೋಟಕ್ಕೆ ಮೈತ್ರಿ ಅಭ್ಯರ್ಥಿ ಬ್ರೇಕ್‌ ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದರೋಡೆಕೋರರ ನಾಯಕ: ಛಲವಾದಿ ನಾರಾಯಣಸ್ವಾಮಿ

ಸತತ ನಾಲ್ಕು ಬಾರಿ ಮರಿತಿಬ್ಬೇಗೌಡ ಗೆದ್ದಿದ್ದರು. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದು ನಂತರದ ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು.

Share This Article