ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಡ್ಯಾಂ ಭರ್ತಿಗೆ ಇನ್ನು ಎರಡು ಅಡಿಯಷ್ಟೇ ಬಾಕಿಯಿದೆ.
ಕೆಆರ್‌ಎಸ್ ಡ್ಯಾಂನಿಂದ (KRS Dam) ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಬಹುತೇಕ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೊರ ಹರಿವು ಹೆಚ್ಚಿಸಲಾಗಿದೆ. ಸದ್ಯ ಡ್ಯಾಂ ಒಳ ಹರಿವು ಹೆಚ್ಚಳವಾಗಿದೆ. ಸದ್ಯ ಡ್ಯಾಂ ಒಳಹರಿವು 69,617 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ನಿನ್ನೆ 51 ಸಾವಿರ ಕ್ಯುಸೆಕ್ ಒಳ ಹರಿವು ಇತ್ತು. ಈಗಾಗಲೇ ಕೆಆರ್‌ಎಸ್ 122.70 ಅಡಿ ಭರ್ತಿಯಾಗಿದೆ. ಇದನ್ನೂ ಓದಿ: ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ: ಆರ್.ಅಶೋಕ್ ಕಿಡಿ
Advertisement
Advertisement
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂನಿಂದ ಸದ್ಯ 25 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಧ್ಯಾಹ್ನದ ವೇಳೆಗೆ ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಹೊರ ಹರಿವು ಹೆಚ್ಚಾದಂತೆ ಡ್ಯಾಂ ಕೆಳಭಾಗದ ನದಿ ಪಾತ್ರದಲ್ಲಿ ನೆರೆ ಭೀತಿ ಇದೆ.
Advertisement
ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಹೊರಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಡ್ಯಾಂನಿಂದ 50 ಸಾವಿರಕ್ಕೂ ಅಧಿಕ ಕ್ಯುಸೆಕ್ ಹೊರಹರಿವು ಮಾಡಲಾಗಿದೆ. ನದಿಗೆ ದಿಢೀರ್ ಹೊರಹರಿವು ಏರಿಕೆ ಮಾಡಲಾಗಿದೆ. ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ಜನರು ನದಿಗಿಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ನಡೆಯಲಿದೆ ವಿನೋದ್ ದೊಂಡಾಳೆ ಅಂತ್ಯಕ್ರಿಯೆ
Advertisement
ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 122.70 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
ಇಂದಿನ ಸಾಮರ್ಥ್ಯ – 46.567 ಟಿಎಂಸಿ
ಒಳ ಹರಿವು – 69,617 ಕ್ಯುಸೆಕ್
ಹೊರ ಹರಿವು – 27,184 ಕ್ಯುಸೆಕ್ (ನದಿ, ನಾಲೆ, ಕುಡಿಯುವ ನೀರು ಸೇರಿ)