ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ (Mysuru Dasara Jamboo Savari) ಒಂದು ದಿನ ಮಾತ್ರ ಬಾಕಿ ಇದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದ್ದು, ನಾಳೆಯ ಜಂಬೂಸವಾರಿ ವೀಕ್ಷಣೆ ಸೇರಿದಂತೆ ನಾಳಿನ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಇದನ್ನೂ ಓದಿ: ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ
ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಕರೂರ್ ಕಾಲುಳ್ತಿತ ದುರಂತ; 2 ವಾರ ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಇನ್ನೂ ನಾಳೆ ಬೆಳಗ್ಗೆ 11 ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಿದ್ದಾರೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜ ಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ. ಇದನ್ನೂ ಓದಿ: 1 ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್ ಹಿಂದಿಕ್ಕಿ ಟಿ20ಯಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ
ಒಟ್ಟಾರೆ ಜಂಬೂಸವಾರಿಗೆ ಸಿದ್ಧತೆಗಳೆಲ್ಲಾ ಆಗಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂರ್ಭಿಯತೆಯೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್ ವಾಪಸ್