ಕಾರವಾರ: ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ (Uttarakannada) ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಇದರಿಂದ ಕರಾವಳಿ ಭಾಗದ ಪ್ರವಾಸಿತಾಣಗಳಲ್ಲಿ ಕೊರೊನಾ (Corona Virus) ಭೀತಿ ಎದುರಾಗಿದೆ.
Advertisement
ಉತ್ತರ ಕನ್ನಡ ಜಿಲ್ಲೆ ಎಂದಾಕ್ಷಣ ಕಡಲತೀರ, ಪ್ರಕೃತಿ ಸೌಂದರ್ಯ ದೇಶ ವಿದೇಶಿಗರನ್ನು ತನ್ನತ್ತ ಸೆಳೆಯುತ್ತದೆ. ಆದ್ರೆ ಇದೀಗ ಜಿಲ್ಲೆಯ ಜನರಿಗೆ ಪ್ರವಾಸಿಗರೇ ಸಂಕಷ್ಟವಾಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ ದಂಡು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹರಿದುಬರುತ್ತಿದೆ. ಜೊತೆಗೆ ಗೋವಾ ಗಡಿಯಾದ್ದರಿಂದ ವಿದೇಶಿ ಪ್ರವಾಸಿಗರು ಸಹ ಕಾರವಾರ, ಗೋಕರ್ಣ, ಮುರುಡೇಶ್ವರಕ್ಕೆ ಲಗ್ಗೆ ಇಡುತ್ತಿದ್ದು, ಇದು ಕರಾವಳಿ ಭಾಗದ ಜನರಲ್ಲಿ ಕೊರೊನಾ ಆತಂಕ ಮೂಡಿಸಿದೆ.
Advertisement
Advertisement
ಇತ್ತ, ಗೋವಾ (Goa) ಕ್ಕೆ ಬರುವ ವಿದೇಶಿ ಪ್ರವಾಸಿಗರು ಕೊರೊನಾದ ಯಾವುದೇ ನಿರ್ಬಂಧವಿಲ್ಲದೇ ಕರ್ನಾಟಕ ಗಡಿ ಪ್ರವೇಶ ಮಾಡ್ತಿದ್ದಾರೆ. ಗಡಿಯಂಚಿನ ಮಾಜಾಳಿಯಲ್ಲಿ ಯಾವುದೇ ತಪಾಸಣೆ ಮಾಡುತ್ತಿಲ್ಲ. ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಪಡೆಯುತ್ತಿಲ್ಲ. ಇನ್ನು ಗಡಿಯಲ್ಲಿ ಭದ್ರತಾ ಸಿಬ್ಬಂದಿ ಸಹ ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ನಡೆದುಕೊಳ್ಳುತ್ತಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅಸೆಂಬ್ಲಿ ಎಲೆಕ್ಷನ್ ಮೇಲೆ ಬಿಜೆಪಿ ಚಾಣಾಕ್ಯನ ಕಣ್ಣು- ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ
Advertisement
ಜಿಲ್ಲಾ ಕೇಂದ್ರ ಕಾರವಾರದಲ್ಲಿ ಕೋವಿಡ್ ಟೆಸ್ಟ್ (COVID 19 Test) ಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೀಗ ಅದನ್ನೂ ಬಂದ್ ಮಾಡಲಾಗಿದೆ. ಇತ್ತ ವ್ಯಾಕ್ಸಿನ್ ಸಂಗ್ರಹಿಸುವ ಪ್ರಿಜ್‍ಗಳು ಬೇಕಾಬಿಟ್ಟಿಯಾಗಿ ಬಿದ್ದಿದೆ. ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು 12 ಬೆಡ್ ಗಳ ಚಿಕಿತ್ಸಾ ಕೊಠಡಿ, ಕ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ 480 ಬೆಡ್‍ಗಳ ಆಕ್ಸಿಜನ್-ವೆಂಟಿಲೇಟರ್ ವ್ಯವಸ್ಥೆಯನ್ನು ಮಾತ್ರ ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಪ್ರವಾಸೋದ್ಯಮ ಇಲಾಖೆ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳ ಕೊನೆಯಲ್ಲಿ 4,666 ವಿದೇಶಿ ಪ್ರಜೆಗಳು ಭೇಟಿ ನೀಡಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಹತ್ತು ಪಟ್ಟು ವಿದೇಶಿ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಜಿಲ್ಲಾಡಳಿತ ಎಚ್ಚೆತ್ತು ಕೊರೊನಾ ನಿಯಮ ಜಾರಿಗೆ ಮಾಡದಿದ್ರೆ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಆರ್ಭಟ ಪ್ರಾರಂಭವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.