ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಐತಿಹಾಸಿಕ ನಾಗರಾಧಾನ ಕ್ಷೇತ್ರ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ (Ghati Subramanya Temple) ಎರಡು ತಿಂಗಳ ನಂತರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು 72 ಲಕ್ಷ ರೂ. ಸಂಗ್ರಹವಾಗಿದೆ.
ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ (Temple) ಒಟ್ಟು 72,37098 ರೂ. ಮೊತ್ತ ಸಂಗ್ರಹವಾಗಿದ್ದು, ಜೊತೆಗೆ 40 ಸಾವಿರ ರೂಪಾಯಿ ಮೌಲ್ಯದ 9 ಗ್ರಾಂ 870 ಮಿಲಿ ಚಿನ್ನ, 72,200 ರೂ. ಮೌಲ್ಯದ 2 ಕೆ.ಜಿ 400 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಇಂದಿಗೆ 8 ಶತಕೋಟಿ ಮೀರಿತು ಜಾಗತಿಕ ಜನಸಂಖ್ಯೆ: ವಿಶ್ವಸಂಸ್ಥೆ
Advertisement
Advertisement
ಈ ವೇಳೆ ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರೀ, ದೇವಾಲಯದ ಸೂಪರ್ ಡೆಂಟ್ ರಘು, ನಂಜಪ್ಪ ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದೆ. ಇದನ್ನೂ ಓದಿ: ಮುಸ್ಲಿಮರ ವೋಟು ಪಡೆಯೋಕೆ ಕಾಂಗ್ರೆಸ್ ಕೇಸರಿ ವಿರೋಧ ಮಾಡ್ತಿದೆ – ಬಿ.ಸಿ.ನಾಗೇಶ್ ಕಿಡಿ