– ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಅವಮಾನ
ಜೈಪುರ: ಕಾಂಗ್ರೆಸ್(Congress) ಪಕ್ಷವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಗೀತೆಗೆ ವಂದೇ ಮಾತರಂಗೆ(Vande Mataram) ಅಪಮಾನ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಶನಿವಾರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡುತ್ತಿದ್ದ ವೇಳೆ ಅದನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ಅವರು ಪಕ್ಷದ ಅಧ್ಯಕ್ಷರಿಗೆ ಸೂಚಿಸಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನವರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಂದೇ ಮಾತರಂ ಗೀತೆ ಹಾಡಲಾಗುತ್ತಿತ್ತು. ಆ ಸಮಯದಲ್ಲಿ ಸೋನಿಯಾ ಗಾಂಧಿ ಅವರು ಗಾಯನವನ್ನು ನಿಲ್ಲಿಸುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ಹೇಳಿದರು. ನಾವೆಲ್ಲರೂ ಇದನ್ನು ಟಿವಿಯಲ್ಲಿ ನೋಡಿದ್ದೇವೆ ಎಂದರು.
#WATCH | Chittorgarh, Rajasthan | Union Home Minister Amit Shah says, “Look at their (Congress’s) shamelessness. The anthem Vande Mataram was being sung at the Congress Party headquarters. During the anthem, Congress leader Sonia Gandhi told the Congress President to stop… pic.twitter.com/HSbiWGf1La
— ANI (@ANI) August 16, 2026
ನೇರವಾಗಿ ಸೋನಿಯಾ ಗಾಂಧಿಯವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸೋನಿಯಾ ಜೀ, ದೇಶದ 140 ಕೋಟಿ ಜನ ನಿಮ್ಮನ್ನು ಗಮನಿಸುತ್ತಿದ್ದಾರೆ. ನೀವು ಮಾಡಿರುವ ಈ ಪಾಪವನ್ನು ಈ ದೇಶದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಂದೇ ಮಾತರಂ ಗೀತೆಯನ್ನು ಅಪೂರ್ಣವಾಗಿ ಬಿಡುವುದನ್ನು ಯಾರಾದರೂ ಕಲ್ಪಿಸಿಕೊಳ್ಳಲು ಸಾಧ್ಯವೇ? ಇದಕ್ಕಾಗಿ ಕಾಂಗ್ರೆಸ್‌ನವರು ನಾಚಿಕೆಪಡಬೇಕು ಎಂದು ಅವರು ಟೀಕಿಸಿದರು.
This single video has stripped away the carefully cultivated veneer of congeniality and exposed something far more troubling.
The impulse to disrupt or diminish Vande Mataram, a song that stirred generations of freedom fighters and became one of the most powerful expressions of… pic.twitter.com/Zz3hFAqYk9
— Amit Malviya (@amitmalviya) August 16, 2026
ವೋಟ್ ಬ್ಯಾಂಕ್(Vote Bank) ಆಸೆಗೆ ಬಿದ್ದು ಕಾಂಗ್ರೆಸ್ ವಂದೇ ಮಾತರಂ ಅನ್ನು ಮರೆತಿದೆ ಎಂದು ಆರೋಪಿಸಿದ ಗೃಹ ಸಚಿವರು, ರಾಷ್ಟ್ರೀಯ ಗೀತೆಗೆ ಮಾಡಿದ ಅಪಮಾನಕ್ಕಾಗಿ ಕಾಂಗ್ರೆಸ್ ಪಕ್ಷವು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವಿಡಿಯೊ ತುಣುಕನ್ನು ಬಿಜೆಪಿ ಶನಿವಾರ ಹಂಚಿಕೊಂಡ ನಂತರ ಈ ವಿವಾದ ಭುಗಿಲೆದ್ದಿದೆ. ವಂದೇ ಮಾತರಂ ಗಾಯನದ ವೇಳೆ ಸೋನಿಯಾ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
