ರಾಯಚೂರು: ಅಬಕಾರಿ ಪೊಲೀಸರು (Excise Police) ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿ 400 ಲೀ. ಸೇಂದಿ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಹಿಂದೂಗಳ ಸುರಕ್ಷತೆ ಖಚಿತಪಡಿಸಿ: ಚಿನ್ಮಯ್ ಕೃಷ್ಣ ದಾಸ್ ಬಂಧಿಸಿದ್ದಕ್ಕೆ ಬಾಂಗ್ಲಾಗೆ ಭಾರತ ತರಾಟೆ
Advertisement
ಇತ್ತೀಚಿಗೆ ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿದ್ದು, ಇದೀಗ ನಗರದ ಗದ್ವಾಲ್ ರಸ್ತೆಯ ವೀರಾಂಜನೇಯ ಸ್ವಾಮಿ ದೇವಸ್ಥಾನ ಬಳಿಯಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 400 ಲೀಟರ್ ಕಲಬೆರಕೆ ಸೇಂದಿ ಜಪ್ತಿ ಮಾಡಿದ್ದಾರೆ. ಅಕ್ರಮ ಮಾರಾಟದಲ್ಲಿ ತೊಡಗಿದ್ದ ಹಣಮಂತ, ಲಕ್ಷ್ಮಿ ದಂಪತಿಯನ್ನ ವಶಕ್ಕೆ ಪಡದಿದ್ದಾರೆ.
Advertisement
ದಂಪತಿ ಪಾತ್ರೆ, ಸಾಮಾನುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಬಳಿಕ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಸೇಂದಿ ಮಾರಾಟ ಮಾಡುತ್ತಿದ್ದರು. ದಿನನಿತ್ಯದಂತೆ ಬೆಳಿಗ್ಗೆ ಸೇಂದಿ ಪ್ಯಾಕ್ ಮಾಡುವಾಗ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕಲಬೆರಕೆ ಸೇಂದಿ ಹಾಗೂ ರಾಸಾಯನಿಕ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ಬಳಿಕ ಸೆಕೆಂಡ್ ಹ್ಯಾಂಡ್ ಎಂದು ಟೀಕಿಸಿದರು: ಸಮಂತಾ