Sunday, 17th November 2019

ನದಿಗೆ ಹಾರಿದ ದಂಪತಿ – ಸೀರೆಯ ಸೆರಗಿನಿಂದ ಪತ್ನಿ ಪಾರು

ವಿಜಯಪುರ: ಮಕ್ಕಳಾಗಲ್ಲವೆಂದು ನೊಂದ ದಂಪತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿಯ ಸೀರೆಯ ಸೆರಗು ಬಿಚ್ಚಿ ಸೇತುಗೆ ಸಿಕ್ಕಿಹಾಕಿಕೊಂಡಿದ್ದರಿಂದ ಮಹಿಳೆ ಪಾರಾಗಿರುವ ಘಟನೆ ಜಿಲ್ಲೆಯ ಕೋಲ್ಹಾರ ಸೇತುವೆಯಲ್ಲಿ ನಡೆದಿದೆ.

ರಮೇಶ್ ಮತ್ತು ಮಲ್ಲಮ್ಮ ಆತ್ಮಹತ್ಯೆಗೆ ಯತ್ನಿಸಿರುವ ದಂಪತಿ. ಈ ದಂಪತಿಗೆ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದೆ. ಆದರೆ ಇನ್ನೂ ಇವರಿಗೆ ಮಕ್ಕಳಾಗಿರಲಿಲ್ಲ. ಇದರಿಂದ ನೊಂದ ದಂಪತಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದು, ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಸೇತುವೆ ಮೇಲಿನಿಂದ ಹಾರುವಾಗ ಸೀರೆಯ ಸೆರಗು ಬಿಚ್ಚಿ ಸೇತುಗೆ ಸಿಕ್ಕಿಹಾಕಿಕೊಂಡಿದ್ದರಿಂದ ಪತ್ನಿ ಮಲ್ಲಮ್ಮ ಪಾರಾಗಿದ್ದಾರೆ. ಆದರೆ ಪತಿ ರಮೇಶ್ ನೀರಿನಲ್ಲಿ ಮುಳುಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ರಮೇಶ್‍ಗಾಗಿ ನದಿಯಲ್ಲಿ ಶೋಧಕಾರ್ಯ ಮಾಡುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ತೋಳಮಟ್ಟಿ ಗ್ರಾಮದವನ್ನು ತಿಳಿದು ಬಂದಿದೆ. ಸದ್ಯಕ್ಕೆ ಕೋಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲ್ಲಮ್ಮ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಕೋಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *