ಬಳ್ಳಾರಿ: ಕೌಟುಂಬಿಕ ಕಲಹದಿಂದಾಗಿ ಪತಿ (Husband) -ಪತ್ನಿ (Wife) ಇಬ್ಬರೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್‌ನಲ್ಲಿ ನಡೆದಿದೆ.
ಪತಿ ಅಂಬರೀಶ್ (24) ಹಾಗೂ ಪತ್ನಿ ಶೃತಿ (20) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಬರೀಶ್ ಹಾಗೂ ಶೃತಿ ಒಂದು ವರ್ಷದ ಹಿಂದಷ್ಟೇ ಮದ್ವೆ ಆಗಿದ್ರು. ಇಬ್ಬರ ಮಧ್ಯೆ ಜಗಳವಾಗಿತ್ತು ಎನ್ನಲಾಗಿದೆ.
ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

