ಬೆಂಗಳೂರು: ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಜೋಡಿ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರದಲ್ಲಿ ನಡೆದಿದೆ.
ರವಿಂದ್ರನ್(69) ಮತ್ತು ಉಮಾ(55) ಆತ್ಮಹತ್ಯೆ ಮಾಡಿಕೊಂಡ ಜೋಡಿ. ವನ್ನಾರ್ ಪೇಟೆ ಬಾಲಾಜಿ ಥಿಯೇಟರ್ ಬಳಿ ನವೀನ್ ಪ್ಯಾರಡೈಸ್ ಬಟ್ಟೆ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಇಬ್ಬರು ಎರಡು ದಿನಗಳ ಹಿಂದೆಯೇ ನೇಣಿಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Advertisement
Advertisement
ಇವರಿಬ್ಬರು ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದವರು. ಇವರು ಬಟ್ಟೆ ಅಂಗಡಿಗಾಗಿ ಬ್ಯಾಂಕಿನಿಂದ ಲೋನ್ ಪಡೆದಿದ್ದರು. ಆದರೆ ಬ್ಯಾಂಕಿಗೆ ಲೋನ್ ಕಟ್ಟಿರಲಿಲ್ಲ. ಆದ್ದರಿಂದ ಬ್ಯಾಂಕಿನವರು ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಇವರ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬ್ಯಾಂಕಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
Advertisement
ಎರಡು ದಿನಗಳಾದರು ಇವರು ಬಟ್ಟೆ ಅಂಗಡಿಯನ್ನು ತೆರೆದಿರಲಿಲ್ಲ. ಬಳಿಕ ಶವದ ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ವಿವೇಕನಗರ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv