ಮಂಗಳೂರು: ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಬಳಿ ನಡೆದಿದೆ.
ಕಾಶಿಪಟ್ನದ ಉರ್ದುಗುಡ್ಡೆ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ತಡರಾತ್ರಿ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ
ನೋಣಯ್ಯ ಪೂಜಾರಿಯ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದ್ದರು. ಬಳಿಕ ಬೇಬಿ ಅವರನ್ನ ಎರಡನೇ ಮದುವೆಯಾಗಿದ್ದರು. ಕಳೆದ ಐದು ವರ್ಷದಿಂದ ನೊಣಯ್ಯ ಪೂಜಾರಿ ತಲೆನೋವಿನಿಂದ ಬಳಲುತ್ತಿದ್ದು ಇದರಿಂದ ನೊಂದಿದ್ದರು.
ಇತ್ತ ಪತ್ನಿ ಬೇಬಿಯೂ ಮಕ್ಕಳಾಗಿರಲಿಲ್ಲ ಅನ್ನೋ ಕೊರಗಿನಲ್ಲಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Davanagere Violence | ಕಲ್ಲು ತೂರಾಟ – ಗಣೇಶ ಸಮಿತಿ 8 ಜನ ಸೇರಿ 18 ಮಂದಿಗೆ ನ್ಯಾಯಾಂಗ ಬಂಧನ