ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಅನುಮಾನಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕು ಚಿಕ್ಕಕಣಿವೆಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಲರಾಜು (35) ಮತ್ತು ಚಲ್ಲಕಣ್ಣು (20) ನೇಣಿಗೆ ಶರಣಾದ ದಂಪತಿ. ಮನೆಯಲ್ಲೇ ಇಬ್ಬರೂ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬಾಲರಾಜು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಶರಣಾದರೆ, ಪತ್ನಿ ಚಲ್ಲಕಣ್ಣು ಪತಿಯ ಶವದ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಘಟನೆ ನಡೆದ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.