ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಡುರಸ್ತೆಯಲ್ಲಿ `ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಯುವಕ – ವೆಬ್ ಸೀರಿಸ್ ತಂದಿಟ್ಟ ಸಂಕಷ್ಟ
ಮೈಸೂರಿನ ಖಾಸಗಿ ಕಂಪನಿಯಲ್ಲಿ ಪುರುಷೋತ್ತಮ್ ಉದ್ಯೋಗ ಮಾಡುತ್ತಿದ್ದ. ದಂಪತಿ ನಡುವೆ ಆಗಾಗ ಕಲಹಗಳು ನಡೆಯುತ್ತಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಾಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದಂಪತಿಗೆ 7 ಹಾಗೂ 5 ವರ್ಷದ ಮಕ್ಕಳಿದ್ದಾರೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ (Srirangapatna Rural Station) ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಶವ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.