ಹೈದರಾಬಾದ್: ಮಗಳ ಸಾವಿನಿಂದ ನೊಂದ ದಂಪತಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಕಮರಪಲ್ಲಿ ಮಂಡಲ್ ನ ನರ್ಸಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂದೀಪ್ ಮತ್ತು ನವನೀತಾ ಆತ್ಮಹತ್ಯೆಗೆ ಶರಣಾದ ದಂಪತಿ. ಇವರಿಗೆ 5 ವರ್ಷದ ಮಗಳು ಮತ್ತು 3 ವರ್ಷದ ಮಗ ಇದ್ದರು. ಆದರೆ ಶುಕ್ರವಾರ ಇಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
Advertisement
ದಂಪತಿಯ ಮಗಳು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೇ ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದಾಳೆ. ಅಂದಿನಿಂದ ಈ ದಂಪತಿ ಮಗಳನ್ನ ಕಳೆದುಕೊಂಡ ದುಃಖದಲ್ಲಿದ್ದರು. ಪ್ರತಿದಿನ ಮಗಳ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಹೋಗುತ್ತಿದ್ದು, ಸ್ಮಶಾನದಲ್ಲೇ ಮಲಗುತ್ತಿದ್ದರು. ಇದನ್ನು ನೋಡಿದ ಗ್ರಾಮಸ್ಥರು ಮತ್ತು ಸಂಬಂಧಿಕರು ಅವರನ್ನು ಮನೆಗೆ ಕರೆದುಕೊಂಡು ಬಂದು ಸಮಾಧಾನ ಮಾಡುತ್ತಿದ್ದರು.
Advertisement
Advertisement
ದಂಪತಿ ಮಾತ್ರ ತಮ್ಮ ಮಗಳನ್ನು ಮರೆಯಲು ಸಾಧ್ಯವಾಗದೇ ಒಂದು ದಿನ ಸಂದೀಪ್ ತಮ್ಮ ತಂದೆಯ ಮನೆಗೆ ಹೋಗಿದ್ದಾರೆ. ಅಲ್ಲಿ ಇಬ್ಬರು ಮನೆಯ ಬಾಗಿಲು ಲಾಕ್ ಮಾಡಿಕೊಂಡು ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂದೀಪ್ ತಂದೆ ಭಯಗೊಂಡು ಬಂದು ಬಾಗಿಲು ಬಡಿದಿದ್ದಾರೆ. ಆದರೆ ಯಾರು ಬಾಗಿಲು ತೆರೆಯಲಿಲ್ಲ. ನಂತರ ಮನೆಯ ಕಿಟಿಕಿಯಿಂದ ನೋಡಿದಾಗ ಇಬ್ಬರು ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ.
Advertisement
ನಂತರ ಸಂಬಂಧಿಕರು, ಗ್ರಾಮಸ್ಥರು ಬಂದು ಬಾಗಿಲು ಮುರಿದು ಒಳ ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಕಮರಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ದಂಪತಿ ಆತ್ಯಹತ್ಯೆಗೆ ಶರಣಾಗುವ ಮುನ್ನ ಡೆತ್ನೋಟ್ ಬರೆದಿದ್ದು, ನಮ್ಮ ಮಗಳನ್ನು ನಮ್ಮಿಂದ ಮರೆಯಲು ಸಾಧ್ಯವಾಗುತ್ತಿಲ್ಲ. ಅವಳನ್ನು ಬಿಟ್ಟು ಇರಲು ತುಂಬಾ ಕಷ್ಟವಾಗುತ್ತಿದೆ. ಆದ್ದರಿಂದ ನಾವು ಆತ್ಯಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿದ್ದಾರೆ.