Wednesday, 18th September 2019

Recent News

ದುರಂತ ಅಂತ್ಯ ಕಂಡ ಅನೈತಿಕ ಸಂಬಂಧ- ಒಂದೇ ಮರಕ್ಕೆ ನೇಣಿಗೆ ಶರಣಾದ ಜೋಡಿ

ಭುವನೇಶ್ವರ: ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿದೆ.

ಇಂದು ಬೆಳಗ್ಗೆ ಚಂಡಿ ಬಜಾರ್ ಪ್ರದೇಶದಲ್ಲಿ ವ್ಯಕ್ತಿ ಮತ್ತು ಮಹಿಳೆ ಇಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕುಮಾಂಡರ್ ಪ್ರದೇಶದ ರಾಜನ್ ಸಾಹು ಮತ್ತು ಸುಜಾತಾ ಸಾಹು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ರಂಜನ್ ತನ್ನ ಬಾವನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಇಬ್ಬರ ಪ್ರೀತಿಯ ವಿಷಯ ಹೊರ ಬಂದಿತ್ತು. ಆದರೆ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಂಜನ್ ಮತ್ತು ಸುಜಾತಾ ಶವವಾಗಿ ಪತ್ತೆಯಾಗಿದ್ದಾರೆ.

ಇಂದು ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಮರದಲ್ಲಿ ನೇತಾಡುತ್ತಿದ್ದ ಶವಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ತನಿಖೆಯನ್ನು ಮುಂದುರಿಸಿದ್ದಾರೆ. ಆದರೆ ಇವರಿಬ್ಬರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *