ದಾವಣಗೆರೆ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ದಾವಣಗೆರೆ ಹೊರವಲಯದ ಹೊಸಕುಂದವಾಡ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಬೆಂಗಳೂರು ಮೂಲದ ಶಿವಪ್ರಕಾಶ್ (43) ಮತ್ತು ಉಮಾ (40) ಮೃತ ದಂಪತಿ. ಬೆಂಗಳೂರಿನಿಂದ ಹರಿಹರ ತಾಲೂಕಿನ ಉಕ್ಕಡಗಾತ್ರಿಗೆ ಹೋಗುತ್ತಿದ್ದರು. ಇಂದು ಅಮಾವಾಸ್ಯೆ ಇದ್ದುದರಿಂದ ಉಕ್ಕಡಗಾತ್ರಿ ಅಜ್ಜಯ್ಯನ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
Advertisement
Advertisement
ಹೊಸಕುಂದವಾಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವೇಗವಾಗಿ ಬಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
ಈ ಕುರಿತು ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.