ಕೊಪ್ಪಳ: ಮದುವೆಯಾಗಿ ಸಾಂಸಾರಿಕ ಜೀವನ ನಡೆಸಬೇಕಿದ್ದ ಜೋಡಿ ಅಪಘಾತದಲ್ಲಿ ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಅಪಘಾತವಾಗಿದೆ. ಕವಿತಾ ಹಾಗೂ ಕರಿಯಪ್ಪ ಮೃತ ದುರ್ದೈವಿಗಳು.
ಕವಿತಾ ಮತ್ತು ಕರಿಯಪ್ಪನಿಗೆ ಮದುವೆ ನಿಶ್ಚಯವಾಗಿತ್ತು. ಪ್ರೀ ವೆಡ್ಡಿಂಗ್ ಫೋಟೊಶೂಟ್‌ಗೆ ಹೋಗಿದ್ದರು. ಶೂಟ್ ಮುಗಿಸಿಕೊಂಡು ವಾಪಸ್ ಆಗುವಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕವಿತಾ ಗಂಗಾವತಿ ತಾಲೂಕಿನ ಮುಷ್ಟೂರ ನಿವಾಸಿ. ಕರಿಯಪ್ಪ ಕೊಪ್ಪಳ ತಾಲೂಕಿನ ಹನುಮನಹಟ್ಟಿ ನಿವಾಸಿ.

