ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ದಂಪತಿ ಸಜೀವ ದಹನವಾದ ಘಟನೆ ರಾಯಚೂರಿನ ಮಾನ್ವಿಯ ಅಮರೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ.
ಪ್ರಕಾಶ್(55), ಕೃಷ್ಣವೇಣಿ(50) ಮೃತ ದುರ್ದೈವಿ ದಂಪತಿ. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನೆಲ್ಲಿನ ಹೊಟ್ಟಿಗೆ ವಿದ್ಯುತ್ ಸ್ಪರ್ಶಿಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆಯನ್ನು ಆವರಿಸಿದ್ದು, ಪರಿಣಾಮ ಮನೆಯೊಳಗಿದ್ದ ದಂಪತಿ ಸುಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.