ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ (Couple) ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42), ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಮಳೆಯ ನಡುವೆಯೇ ಉತ್ತರ ಕನ್ನಡದಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್ ಘೋಷಣೆ
ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮನೆ ಮನೆಗೆ ಹೋಗದೆ ಒಂದೇ ಕಡೆ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
