ಬೆಂಗಳೂರು: ಪಬ್‍ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಜೋಡಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ನಡೆದಿದೆ.
ಪವನ್ ಅತ್ತಾವರ್ ಹಾಗೂ ವೇದಾ ಆರ್ ಮೃತ ಜೋಡಿ. ಶುಕ್ರವಾರ ರಾತ್ರಿ ಸುಮಾರು 11:30ಕ್ಕೆ ಪವನ್ ಅತ್ತಾವರ್ ಹಾಗೂ ವೇದಾ ಆರ್ ಎಂಬವರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿರುವ ಆಶ್ ಬೀರ್ ಪಬ್‍ಗೆ ಬಂದಿದ್ದರು. ಪಬ್‍ನ ಕೊನೆಯ ರೂಫ್ ಫ್ಲೋರ್‌ನಲ್ಲಿ ಕುಳಿತು ಪಾರ್ಟಿ ಮಾಡಿದ್ದ ಪವನ್ ಹಾಗೂ ವೇದಾ ರೂಫಿನ ತುದಿಯಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ನೆಲಕ್ಕೆ ಬಿದ್ದಿದ್ದಾರೆ.
ಘಟನೆಯಲ್ಲಿ ಪವನ್ ಹಾಗೂ ವೇದಾ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಇದೇ ವೇಳೆ ನೂತನ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರು ಚರ್ಚ್ ಸ್ಟ್ರೀಟ್ ರೋಡಲ್ಲಿ ನೈಟ್ ರೌಂಡ್ಸ್ ನಲ್ಲಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರ ಪರಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಅಷ್ಟರಲ್ಲಿ ಮೃತಪಟ್ಟಿದ್ದರು.
ಪವನ್ ಅತ್ತಾವರ್ ರಾಷ್ಟ್ರೀಯ ಪತ್ರಿಕೆಯಲ್ಲಿ ಹಾಗೂ ವೇದಾ ಆರ್ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಬ್ ಮಾಲೀಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]