ಚಿಕ್ಕೋಡಿ: ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿಗೆ (Ghataprabha River) ಅಡ್ಡಲಾಗಿರುವ ಸೇತುವೆ ಮೇಲೆ ನಡೆದಿದೆ.
ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ್ದಾರೆ.
Advertisement
Advertisement
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ. ನದಿಯಲ್ಲಿನ ಜಯಶ್ರೀ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ- ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್
Advertisement
Advertisement
ಸೇತುವೆಗೆ (Bridge) ತಡೆಗೋಡೆ ನಿರ್ಮಿಸದೇ ನೀರಾವರಿ ಇಲಾಖೆಯ ನಿರ್ಲಕ್ಷ್ಯ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.