ತುಮಕೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನವ ದಂಪತಿ ಸಾವನಪ್ಪಿದ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.
ರಘು (35) ಹಾಗೂ ಅನುಷಾ (28) ಮೃತ ನವ ದಂಪತಿ. ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ಹೋಗುತಿದ್ದರು. ಈ ವೇಳೆ ಹುಳಿಯಾರ್ ಗೇಟ್ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ದಂಪತಿ ಅಸುನೀಗಿದ್ದಾರೆ. ಇದನ್ನೂ ಓದಿ: ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!
ಹಾಸನ ಜಿಲ್ಲೆ ಅರಸಿಕೇರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿಯ ತಿಗಳನಹಳ್ಳಿಯ ಅನುಷಾ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇಬ್ಬರೂ ಸಾಫ್ಟ್ವೇರ್ ಎಂಜಿನಿಯರ್ಗಳಾಗಿದ್ದು, ಪ್ರೀತಿಸಿ ಮದುವೆ ಆಗಿದ್ದರು. ಘಟನೆ ಸಂಬಂಧ ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k