ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ

Public TV
2 Min Read
Bengaluru Bellandur Auto Driver Attack By Hindi Woman

ಬೆಂಗಳೂರು: ಆಟೋ ಚಾಲಕನಿಗೆ (Auto Driver) ಹಿಂದಿ ಮಹಿಳೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಬಿಹಾರ ಮೂಲದ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.

ಆಟೋ ಚಾಲಕನ ಬಳಿ ಕ್ಷಮೆಯಾಚಿಸಿದ ದಂಪತಿ, ಎಲ್ಲಾ ಕನ್ನಡಿಗರು ನಮ್ಮನ್ನು ಕ್ಷಮಿಸಿ. ಆಟೋ ಚಾಲಕರ ಬಗ್ಗೆ ಗೌರವವಿದೆ. ಬೆಂಗಳೂರನ್ನು ಪ್ರೀತಿಸುತ್ತೇವೆ. ಇಲ್ಲಿನ ವಾತವರಣವನ್ನು ಪ್ರೀತಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ

Auto Driver Lokesh Bellandur Hindi Woman Attacked By Slipper

ನಾವು ಹೋಗುವಾಗ ಏನೋ ಘಟನೆ ಆಯ್ತು. ಬೇಕು ಬೇಕು ಅಂತ ಮಾಡಿದ್ದಲ್ಲ. ನಾನು ಕ್ಷಮೆ ಕೇಳುತ್ತೇನೆ. ನಾನು ಗರ್ಭಿಣಿ. ಗರ್ಭಪಾತ ಆಗುವ ಭಯದಲ್ಲಿ ಹೀಗೆ ಮಾತನಾಡಿದೆ. ಬೆಂಗಳೂರು (Bengaluru) ಅಂದರೆ ತುಂಬಾ ಇಷ್ಟ.ಬೆಂಗಳೂರು, ಬೆಂಗಳೂರು ಸಂಸ್ಕೃತಿಯನ್ನು ತುಂಬಾ ಗೌರವಿಸುತ್ತೇವೆ ಹಾಗೂ ಪ್ರೀತಿಸುತ್ತೇವೆ ಎಂದು ಮಹಿಳೆ ಹೇಳಿದ್ದಾಳೆ. ಇದನ್ನೂ ಓದಿ: ತಪ್ಪಿಲ್ಲದಿದ್ರೂ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ: ಆಟೋ ಚಾಲಕ

ಇನ್ನು ಮಹಿಳೆಯ ಪತಿ ಮಾತನಾಡಿ, ನಾವು ಮೂರು ವರ್ಷದಿಂದ ಬೆಂಗಳೂರಿನಲ್ಲಿದ್ದೇವೆ. ತವರಿನಂತೆ ನಾವು ಇಷ್ಟ ಪಡುತ್ತೇವೆ. ನಮಗೆ ಬೆಂಗಳೂರು ಬಗ್ಗೆ ಯಾವುದೇ ನೆಗೆಟಿವ್ ಅಭಿಪ್ರಾಯಗಳಿಲ್ಲ. ಆಟೋ ಚಾಲಕರನ್ನು ಗೌರವಿಸುತ್ತೇವೆ ಎಂದರು. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

ಘಟನೆ ಸಂಬಂಧ ಬೆಳ್ಳಂದೂರು (Bellandur) ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಭಾನುವಾರ ಪೊಲೀಸರು ಮಹಿಳೆಯನ್ನು ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು ಎಂದು ಹೇಳಿಕೊಂಡಿದ್ದಾಳೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಳು. ಘಟನೆ ವೇಳೆ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಮಹಿಳೆ ಹೇಳಿಕೊಂಡಿದ್ದಳು. ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಆಕೆಯನ್ನು ವಾಪಸ್ ಕಳುಹಿಸಿದ್ದರು. ಇದನ್ನೂ ಓದಿ: ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ಐಪಿಎಲ್‌ನಲ್ಲಿ ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

Share This Article