ಬೆಂಗಳೂರು: ಕಾರಿನಲ್ಲಿ ಹೋಗುತ್ತಿರುವಾಗ ಸನ್‌ರೂಫ್ (Sun Roof) ತೆಗೆದು ದಂಪತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಗರದ ಕೋರಮಂಗಲದಲ್ಲಿ (Koramangala) ನಡೆದಿದೆ.ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್
ಮಂಗಳವಾರ ರಾತ್ರಿ ದಂಪತಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಸನ್‌ರೂಪ್ ತೆಗೆದು ರೊಮ್ಯಾನ್ಸ್ ಮಾಡಿದ್ದು, ದಂಪತಿಯ ವರ್ತನೆಯನ್ನು ವಾಹನ ಸವಾರರು ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
ಇದನ್ನು ಕಂಡ ಹಲಸೂರು ಪೊಲೀಸರು (Halsuru Police) ಕಾರಿನ ನಂಬರ್ ಆಧಾರಿಸಿ ಮಾಲೀಕರನ್ನು ಪತ್ತೆ ಹಚ್ಚಿದ್ದಾರೆ. ಅಪಾಯಕಾರಿಯಾಗಿ ಕಾರು ಚಲಾಯಿಸಿದ್ದಕ್ಕೆ 1,000 ರೂ. ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ 500 ರೂ. ದಂಡ ವಿಧಿಸಿದ್ದಾರೆ ಹಾಗೂ ಮುಂದೆ ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಮಳೆ – ಮೈದುಂಬಿ ಹರಿಯುತ್ತಿರುವ ಭೀಮಾ ನದಿ