ರಾಯಚೂರು: ಪಾಕಿಸ್ತಾನದಲ್ಲಿ ಸಿಕ್ಕಿ ಬಿದ್ದರೂ ದೇಶ ಪ್ರೇಮ ಮೆರೆದ ವೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಹೆಸರನ್ನು ತಮ್ಮ ಮಗನಿಗೆ ನಾಮಕರಣ ಮಾಡುವ ಮೂಲಕ ರಾಯಚೂರಿನ ಸಿಂಧನೂರಿನ ದಂಪತಿ ದೇಶಾಭಿಮಾನ ಮೆರೆದಿದ್ದಾರೆ.
ಸಿಂಧನೂರು ತಾಲೂಕಿನ ದಿದ್ದಗಿ ಗ್ರಾಮದ ರೈತ ದಂಪತಿ ಸುರೇಶ್ ಹಾಗೂ ಶ್ರೀದೇವಿ ತಮ್ಮ ಮಗನಿಗೆ ಅಭಿನಂದನ್ ಎಂದು ಹೆಸರು ಇಟ್ಟಿದ್ದಾರೆ. ದೇಶಕ್ಕಾಗಿ ಹೋರಾಡಿ ಮರಳಿ ಬಂದಿರುವ ವೀರ ಯೋಧನ ಹೆಸರಿನಿಂದ ಮಗನನ್ನು ಕರೆಯುವುದೇ ದೊಡ್ಡ ಖುಷಿ ಎಂದು ದಂಪತಿ ಹೇಳಿದ್ದಾರೆ. ಇದನ್ನೂ ಓದಿ: ತಮ್ಮ ಮಗುವಿಗೆ ಅಭಿನಂದನ್ ಎಂದು ಹೆಸರಿಟ್ಟ ದಂಪತಿ
Advertisement
Advertisement
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲೂ ಕೂಡ ದಂಪತಿ ವಿಂಗ್ ಕಮಾಂಡರ್ ಅಭಿನಂದನ್ ಗೌರವಾರ್ಥ ನಾಮಕರಣ ಮಾಡಿದ್ದಾರೆ. ಮಹಾಂತೇಶ್ ಶೆಟ್ಟರ್ ಹಾಗೂ ಶಾಂತಾ ಶೆಟ್ಟರ್ ದಂಪತಿ ತಮ್ಮ ಪುತ್ರನಿಗೆ ಅಭಿನಂದನ್ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ: ಮಗನಿಗೆ ಅಭಿನಂದನ್ ಎಂದು ನಾಮಕರಣ ಮಾಡಿದ ಕೊಪ್ಪಳದ ದಂಪತಿ
Advertisement
ದಂಪತಿ ಈ ಮೊದಲು ತಮ್ಮ ಪುತ್ರನಿಗೆ ಅಥರ್ವ ಅಥವಾ ಅಭಿನವ ಎಂದು ನಾಮಕರಣ ಮಾಡುವುದಾಗಿ ನಿರ್ಧರಿಸಿದ್ದರು. ಆದ್ರೆ ಇತ್ತೀಚೆಗೆ ಅಭಿನಂದನ್ ಮಾಡಿದ ಸಾಹಸಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ಮೂರು ತಿಂಗಳ ಗಂಡು ಮಗುವಿಗೆ ಅಭಿನಂದನ್ ಎಂದು ನಾಮಕರಣ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv