Connect with us

Belgaum

ಪತ್ನಿ ಸಾವಿನಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

Published

on

Share this

ಚಿಕ್ಕೋಡಿ: ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ನನಗೆ ವರಗಳನ್ನು ಕೊಡುವ ದೇವರಾಗಿ ಇದ್ರಿ: ಮಾಲಾಶ್ರೀ

ಚನ್ನವ್ವ ರಂಗಾಪುರೆ(40) ಹೃದಯಾಘಾತದಿಂದ ಕಳೆದ ಒಂದು ವಾರದ ಹಿಂದೆ ಸಾವನ್ನಪ್ಪಿದ್ದರು. ಇದರಿಂದ ಮನನೊಂದು ಇಂದು ನೇಣು ಬಿಗಿದು ಪತಿ ಕಾಡಪ್ಪ(47) ಕೀರ್ತಿ(20) ಸ್ಪೂರ್ತಿ(18) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಪ್ಪನ ಡಾನ್ಸ್ ನೋಡೊದ್ರಲ್ಲಿ ಬ್ಯುಸಿಯಾದ ಜ್ಯೂನಿಯರ್ ಚಿರು

ಚನ್ನವ್ವನ ಸಾವಿನಿಂದ ಅವಳ ಪತಿ ಮತ್ತು ಮಕ್ಕಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಒಟ್ಟಿಗೆ ಪ್ರಾಣಕಳೆದುಕೊಂಡಿರುವ ಈ ಘಟನೆಯಿಂದ ಪೊಗತ್ಯಾನಟ್ಟಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement