Chikkaballapur
ಪತ್ನಿ ಜೊತೆ ಅನೈತಿಕ ಸಂಬಂಧ- ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿ

ಚಿಕ್ಕಬಳ್ಳಾಪುರ: ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪದ ಮೇಲೆ ಪತಿ, ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್(40) ಕೊಲೆ ಮಾಡಲು ಯತ್ನಿಸಿದ ವ್ಯಕ್ತಿ. ಈತ ಅರ್ಜುನ್ (28) ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಾನೆ ಎಂಬ ಆರೋಪದ ಮೇಲೆ ಮೇಲೆ ರೇಜರ್ ಬ್ಲೇಡ್ ಹಾಗೂ ಚಾಕುವಿನಿಂದ ತೀವ್ರ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಅರ್ಜುನ್ ಕುತ್ತಿಗೆ ಸೀಳಿದ್ದು ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದಾನೆ. ಈ ವೇಳೆ ಆತನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಿಲಾಗಿದೆ.
ಘಟನೆ ನಂತರ ಆರೋಪಿ ವೆಂಕಟೇಶ್ ನಾಪತ್ತೆಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
