ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿ, ಮಗುವನ್ನು ಪಡೆದ ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಯ ಆರೋಗ್ಯ ವಿಮೆ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
2021ರಲ್ಲಿ ಜಾರಿಗೆ ತರಲಾದ 1971ರ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯ ಪ್ರಕಾರ ಬಾಡಿಗೆ ತಾಯ್ತನದ ಪ್ರಕ್ರಿಯೆಗೆ ಅನುಮತಿಸಬಹುದು. ಹಾಗಾಗಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆಯ ನಿಯಮಗಳಿಗೆ ಸಂಬಂಧಿಸಿ ಸಚಿವಾಲಯ ಜೂನ್ 21ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಅಂಶವನ್ನು ವಿವರಿಸಲಾಗಿದೆ. ಇದನ್ನೂ ಓದಿ: ಮೊದಲ ದಲಿತ, ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ಟ್ವೀಟ್ ಮಾಡಿ ಮುಜುಗರಕ್ಕೀಡಾದ ಕೋಟಾ
Advertisement
Advertisement
ಗರ್ಭ ಧರಿಸಿದ ಅವಧಿ ಹಾಗೂ ಹೆರಿಗೆ ನಂತರ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಈ ಪಾಲಿಸಿಯ ವಿಮಾ ಮೊತ್ತ ಸರಿದೂಗಿಸುವಂತಿರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಪ್ರಕರಣ 858ಕ್ಕೆ ಏರಿಕೆ- ಓರ್ವ ಸಾವು
Advertisement
Advertisement
ಬಾಡಿಗೆ ತಾಯಿಯಾಗಲು ಒಪ್ಪಿಕೊಂಡವರು ಗರಿಷ್ಠ 3 ಬಾರಿ ಬಾಡಿಗೆ ತಾಯ್ತನ ವಿಧಾನಕ್ಕೆ ಒಳಗಾಗಬಹುದು. ವೈದ್ಯಕೀಯ ಗರ್ಭಪಾತ ಕಾಯ್ದೆಯಡಿ, ಗರ್ಭಪಾತ ಮಾಡಿಸಿಕೊಳ್ಳಲು ಅವರಿಗೆ ಅನುಮತಿ ನೀಡಬೇಕು ಎಂದೂ ನಿಯಮದಲ್ಲಿ ಹೇಳಲಾಗಿದೆ.