ಬೆಂಗಳೂರು/ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ (Belekeri Ore Theft Case) ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ನ್ಯಾ.ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಿಚಾರಣೆ ನಡೆಸಿದರು. ಮೊದಲ ಪ್ರಕರಣದಲ್ಲಿ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಇದನ್ನೂ ಓದಿ: ಕೊನೆಗೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಶಿಗ್ಗಾಂವಿ ಟಿಕೆಟ್ ನೀಡಿದ ಕಾಂಗ್ರೆಸ್
Advertisement
Advertisement
ಆರೋಪಿಗಳನ್ನು ಪೊಲೀಸ್ ಕಷ್ಟಡಿಗೆ ಪಡೆಯದಂತೆ ಅವರ ಪರ ವಕೀಲರ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಒಮ್ಮೆ ತೀರ್ಪು ನೀಡಿದ ಮೇಲೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
Advertisement
2010ರಲ್ಲಿ ಅದಿರು ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. 6 ಪ್ರಕರಣಗಳಲ್ಲೂ ಸತೀಶ್ ಸೈಲ್ ದೋಷಿ ಎಂದು ಈಗ ಕೋರ್ಟ್ ತೀರ್ಪಿತ್ತಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 16.17 ಕೋಟಿ ಆಸ್ತಿ ಒಡೆಯ; ಆದ್ರೂ ಸ್ವಂತ ಕಾರು ಇಲ್ಲ!
Advertisement
ತೀರ್ಪು ಹೊರಬೀಳುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಕೋರ್ಟ್ ಬಳಿ ಹಾಜರಾದರು. ಯಾವುದೇ ಕ್ಷಣದಲ್ಲಿ ಸತೀಶ್ ಸೈಲ್ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.