ಬೆಳಗಾವಿ: ಕಳೆದ ಜುಲೈ 2021ರಲ್ಲಿ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿಗೆ ಹೈಕೋರ್ಟ್ ಹಾಗೂ ಸ್ಥಳೀಯ ಕೋರ್ಟ್‍ನಲ್ಲಿ ಜಾಮೀನು ನಿರಾಕರಿಸಲಾಗಿದೆ.
Advertisement
ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ರೋಷನ್ ಡಿಕ್ರೋಜ್‍ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ಆರೋಪಿ ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಆರೋಪಿಯ ಜಾಮೀನನ್ನು ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ
Advertisement
Advertisement
ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ವಕೀಲರಾದ ವಾಕರ್ ಅಹ್ಮದ್ ಶಹಾಪುರಿ ಹಾಗೂ ತಂಡದವರು ವಾದ ಮಂಡಿಸುತ್ತಿದ್ದರು. ಸದ್ಯ ಸಂತ್ರಸ್ತರಿಗೆ ನ್ಯಾಯ ಕೊಡಿಸುವವರಿಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.