ಚೆನ್ನೈ: ಸನಾತನ ಧರ್ಮ ಕುರಿತು ಟೀಕೆ ವಿವಾದಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ರಿಲೀಫ್ ಸಿಕ್ಕಿದೆ. ಉದಯನಿಧಿ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರು ಶಾಸಕರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ (Madras High Court) ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸ್ಟಾಲಿನ್ ಅವರು ಈ ರೀತಿ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಆದರೆ ಇದುವರೆಗೆ ಯಾವುದೇ ನ್ಯಾಯಾಲಯದಿಂದ ಅವರು ಶಿಕ್ಷೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ – ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಛೀಮಾರಿ
Advertisement
Advertisement
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ (Sanatana Dharma) ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಮಾತುಗಳು ಭಾರಿ ಗದ್ದಲ ಎಬ್ಬಿಸಿತ್ತು.
Advertisement
Advertisement
ಉದಯನಿಧಿ ಸ್ಟಾಲಿನ್ ಜೊತೆಗೆ ರಾಜ್ಯ ಸಚಿವ ಪಿ.ಕೆ.ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ.ರಾಜಾ ಅವರನ್ನೂ ವಜಾಗೊಳಿಸುವಂತೆ ಅರ್ಜಿದಾರರು ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್