ಕಲಬುರಗಿ: ಜಿಲ್ಲೆಯ ಮಹಾನಗರ ಪಾಲಿಕೆಯ(Municipal Corporation) ವಾರ್ಡ್ ನಂ. 36ರ ವಿಜೇತ ಅಭ್ಯರ್ಥಿ ಆಯ್ಕೆ ಅಸಿಂಧುವಾಗಿದೆ ಎಂದು ಕಲಬುರಗಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಪಾಲಿಕೆ ವಿಜೇತ ಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಆಯ್ಕೆ ಅಸಿಂಧುಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, ಶಂಭುಲಿಂಗ ಬಳಬಟ್ಟಿ ಜಯಗಳಿಸಿದ್ದರು. ಸುಳ್ಳು ಅಫಿಡವಿಟ್ ಸಲ್ಲಿಸಿದ್ದರಿಂದ ಆಯ್ಕೆ ಅಸಿಂಧುವಾಗಿದೆ. ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಬಿಜೆಪಿಯ(BJP) ಅಭ್ಯರ್ಥಿ ಸೂರಜ್ ತಿವಾರಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಕೇಸ್ – ಮಗಳ ಮದ್ವೆಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ ಎಂದ ತಾಯಿ
Advertisement
Advertisement
ಇದೀಗ ನ್ಯಾಯಾಲಯ(Court) ತೀರ್ಪನ್ನು ನೀಡಿದ್ದು, ಶಂಭುಲಿಂಗ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದೆ. ಚುನಾವಣೆ ನಡೆದು ಹಲವು ತಿಂಗಳು ಕಳೆದರೂ ಈವರೆಗೂ ಮೇಯರ್ ಆಯ್ಕೆ ಆಗಿಲ್ಲ. ಇದನ್ನೂ ಓದಿ: ಕೋಳಿವಾಡ ಸಮಿತಿಯಿಂದ್ಲೇ ಬಾಗ್ಮನೆ ಒತ್ತುವರಿ ಬಯಲು