ಮುಂಬೈ: ಪತ್ರಾ ಚಾಲ್ ಭೂಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5 ರವರೆಗೂ ವಿಸ್ತರಣೆ ಮಾಡಿದೆ.
Advertisement
ಮುಂಬೈನ ಚಾಲ್ ಮರುಅಭಿವೃದ್ಧಿ ಯೋಜನೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಯಲ್ಲಿದ್ದ ಸಂಜಯ್ ರಾವತ್‍ರನ್ನು ಮುಂಬೈನ ವಿಶೇಷ ನ್ಯಾಯಾಲಯ ಆಗಸ್ಟ್ 8 ರಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.
Advertisement
Advertisement
ಇಂದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಜಿ ದೇಶಪಾಂಡೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿದರು. ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ ಎಂದು ಇಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಇದನ್ನೂ ಓದಿ: ನಾನೇನು ವಿಜಯ್ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್ ರಾವತ್ ಕಿಡಿ
Advertisement
ಸಂಜಯ್ ರಾವತ್ ಅವರನ್ನು ಆಗಸ್ಟ್ 1 ರಂದು ಇಡಿ. ಬಂಧಿಸಿದೆ. ಗೋರೆಗಾಂವ್‍ನ ಉಪನಗರದಲ್ಲಿರುವ ಪತ್ರಾ ಚಾಲ್ ಮರು ಅಭಿವೃದ್ಧಿಯಲ್ಲಿ ಯೋಜನೆಯಲ್ಲಿ 1,034 ಕೋಟಿ ರೂ. ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಸಂಜಯ್ ರಾವತ್ ವಿರುದ್ಧ ತನಿಖೆ ನಡೆಸುತ್ತಿದೆ.
Live Tv
[brid partner=56869869 player=32851 video=960834 autoplay=true]