ಬೆಂಗಳೂರು: ಅಕ್ರಮ ಆಸ್ತಿ ಆರೋಪದಲ್ಲಿ ಹಾಲಿ ಸಚಿವ ವಿ.ಸೋಮಣ್ಣಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಎಸಿಬಿಯ ಬಿ ರಿಪೋರ್ಟ್ ತಿರಸ್ಕರಿಸಿದ ಲೋಕಾಯುಕ್ತ ಕೋರ್ಟ್, ಕ್ರಿಮಿನಲ್ ಕೇಸ್ ರಿಜಿಸ್ಟರ್ ಮಾಡಿ ಏಪ್ರಿಲ್ 16ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣಗೆ ಸಮನ್ಸ್ ನೀಡಿದೆ.
Advertisement
ಸೋಮಣ್ಣ ಅವರು ಶಾಸಕರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ರಾಮಕೃಷ್ಣ ಎಂಬವರು 2013 ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಮಾಡಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಸೋಮಣ್ಣ ಯಾವುದೇ ರೀತಿಯಲ್ಲಿ ಅಕ್ರಮ ಆಸ್ತಿ ಗಳಿಸಿಲ್ಲ ಎಂದು ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ‘ಬಿ’ ವರದಿ ಸಲ್ಲಿಸಿದ್ದರು. ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ
Advertisement
Advertisement
ಲೋಕಾಯುಕ್ತ ಪೊಲೀಸರ ಈ ವರದಿಯನ್ನು ತಿರಸ್ಕರಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇದೀಗ ಸಮನ್ಸ್ ಜಾರಿ ಮಾಡಿದೆ. ವಿ. ಸೋಮಣ್ಣ ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಗಳನ್ನು ಲೋಕಾಯುಕ್ತ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಅಸಮರ್ಥ ತನಿಖೆ ನಡೆಸಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್
Advertisement
ಶಾಸಕರಾಗಿದ್ದ ವಿ. ಸೋಮಣ್ಣ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದ ದೂರುದಾರ ವಿಚಾರಣೆಗೆ ಹಾಜರಾಗಿರಲಿಲ್ಲ. ದೂರುದಾರನ ನಡೆ ನೋಡಿ ಅನುಮಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ದೂರುದಾರನಿಗೆ ಎಚ್ಚರಿಕೆ ನೀಡಿತ್ತು. ಆ ಬಳಿಕ ರಾಮಕೃಷ್ಣ ಖಾಸಗಿ ದೂರನ್ನು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿ ಕೈ ತೊಳೆದುಕೊಂಡಿದ್ದರು. ಆದರೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ತನಿಖೆಯನ್ನು ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ.