ಬಾಲಿವುಡ್ (Bollywood) ನಟಿ ಜರೀನ್ ಖಾನ್‌ಗೆ (Zareen Khan) ಈಗ ಸಂಕಷ್ಟ ಎದುರಾಗಿದೆ. ವಂಚನೆ ಪ್ರಕರಣದ ಸಂಬಂಧ ಜರೀನ್ ಖಾನ್‌ಗೆ ಕೋಲ್ಕತಾ ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ.
Advertisement
ವಂಚನೆ ಪ್ರಕರಣ ಸಂಬಂಧವಾಗಿ ಜರೀನ್ ಖಾನ್‌ಗೆ ಕೋಲ್ಕತಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. 2018ರಲ್ಲಿ ಕೋಲ್ಕತಾದಲ್ಲಿ ಆಯೋಜಿಸಿದ್ದ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ಜರೀನ್‌ಗೆ ಆಹ್ವಾನ ನೀಡಲಾಗಿತ್ತು. ಈ ಸಮಾರಂಭಕ್ಕಾಗಿ ಸಂಭಾವನೆ ಕೂಡ ನೀಡಲಾಗಿತ್ತು. ಆದರೆ ಅಂದು ನಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ವಿಚಾರವಾಗಿ ನಟಿಯ ವಿರುದ್ದ ಆಯೋಜಕರು ಎಫ್‌ಐಆರ್ ದಾಖಲಿಸಿದ್ದರು. 2018ರಿಂದ ದಾಖಲಾದ ಪ್ರಕರಣದ ಕುರಿತು ನಟಿ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ.
Advertisement
ಇದೀಗ ಅರೆಸ್ಟ್ ವಾರೆಂಟ್ ಕುರಿತು ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರಲ್ಲಿ ಸತ್ಯವಿಲ್ಲ. ಈ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:8 ವರ್ಷಗಳ ನಂತರ ಸುದೀಪ್‌ಗೆ ಜೊತೆಯಾದ ‘ಮಾಣಿಕ್ಯ’ ಚೆಲುವೆ
Advertisement
Advertisement
ವೀರ್, ಹೇಟ್ ಸ್ಟೋರಿ 3, ಹೌಸ್‌ಫುಲ್ 2 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಜರೀನ್ ಖಾನ್ ನಟಿಸಿದ್ದಾರೆ.