19 ವರ್ಷಗಳ ಹಿಂದಿನ ಕೊಲೆ ಕೇಸಿಗೆ ಮರುಜೀವ-ಯುಪಿ ಸಿಎಂ ಯೋಗಿ ಆದಿತ್ಯನಾಥ್‍ಗೆ ಸಂಕಷ್ಟ

Public TV
1 Min Read
YOGI ADITHYANATH

ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 19 ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

1999 ಜನವರಿಯಲ್ಲಿ ಸಮಾಜವಾದಿ ಪಕ್ಷದ ಗೋರಖ್‍ಪುರ ಮುಖಂಡರೊಬ್ಬರ ವೈಯಕ್ತಿಕ ಭದ್ರತಾ ಅಧಿಕಾರಿ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಜಗಂಜ್ ಜಿಲ್ಲಾ ಸೆಷನ್ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

yogi adityanath

2018 ಮಾರ್ಚ್ ನಲ್ಲಿ ಈ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಸೂಚನೆ ನೀಡುವಂತೆ ಸೆಷನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ವೇಳೆ ನ್ಯಾಯಾಲಯ ಸಾಕ್ಷ್ಯಗಳ ಕೊರತೆಯಿಂದ ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬಳಿಕ ಸಮಾಜವಾದಿ ಮುಖಂಡ ತಾಲತ್ ಅಜಿಜ್ ಲಕ್ನೋ ಹೈಕೋರ್ಟ್ ನಲ್ಲಿ, ಪ್ರಕರಣದ ಮರುವಿಚಾರಣೆ ನಡೆಸುವಂತೆ ಸೆಷನ್ ಕೋರ್ಟ್‍ಗೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಕೊಲೆ ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

Capture 6

ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ಸೆಷನ್ ಕೋರ್ಟ್ ಸದ್ಯ ಪ್ರಕರಣದ ಆರೋಪಿಯಾಗಿರುವ ಯೋಗಿ ಆದಿತ್ಯನಾಥ್ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿ 1 ವಾರಗಳ ಒಳಗಡೆ ಉತ್ತರಿಸುವಂತೆ ಸೂಚಿಸಿದೆ.

ಸದ್ಯ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣದ ಮರುವಿಚಾರಣೆ ಆರಂಭವಾಗುವುದರಿಂದ ಸಿಎಂ ಯೋಗಿ ಆದಿತ್ಯನಾಥ್ ಅವರು ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಲು ಸಮಾಜವಾದಿ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?
1999 ರ ಫೆಬ್ರವರಿ 10 ರಂದು ನಡೆದ ಪ್ರತಿಭಟನೆಯೊಂದರಲ್ಲಿ ಸಮಾಜವಾದಿ ಪಕ್ಷದ ನಾಯಕ ತಲಾತ್ ಅಜಿಜ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಕೊಲೆಯಾಗಿತ್ತು. ಅಂದು ಯೋಗಿ ಆದಿತ್ಯನಾಥ್ ನೇತೃತ್ವದ ಗುಂಪು ಸಮಾಜವಾದಿ ಪಕ್ಷದ ವಿರುದ್ಧ ಜೈಲ್ ಚಲೋ ಹೋರಾಟವನ್ನು ಹಮ್ಮಿಕೊಂಡಿತ್ತು. ಈ ವೇಳೆಯೇ ಗುಂಡಿಟ್ಟು ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆದಿತ್ಯನಾಥ್ ಅವರನ್ನು ಆರೋಪಿಯನ್ನಾಗಿಸಿ ಪ್ರಕರಣ ದಾಖಲು ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *