ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ (Pardon Witness) ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ.
ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ (Darshan) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮಾಫಿ ಸಾಕ್ಷಿ ದಾಖಲಿಸಲು 59ನೇ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್‌ಗೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಬಿಗ್ ಶಾಕ್ – ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಅರ್ಜಿ ವಜಾ
ಮಾಫಿ ಸಾಕ್ಷಿ ಹೇಳಿಕೆ ದಿನಾಂಕ ನಿಗದಿ ಬೆನ್ನಲ್ಲೇ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದರ್ಶನ್ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲು ನಿರ್ಧರಿಸಿದ್ದೇವೆ ಎಂದು ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿರುವುದರಿಂದ ಪ್ರದೂಷ್ ಮಾಫಿ ಸಾಕ್ಷಿ ಹೇಳಿಕೆ ಮುಂದೂಡಲು ಮನವಿ ಮಾಡಿದ್ದು, ಮನವಿಯನ್ನು ನ್ಯಾಯಾಲಯ ತಳ್ಳಿಹಾಕಿದೆ. ಇದಕ್ಕೆ ನ್ಯಾಯಾಲಯ, ಸುಪ್ರೀಂ ಕೋರ್ಟ್ ಟ್ರಯಲ್‌ಗೆ ಟೈಂ ಬಾಂಡ್ ಹಾಕಿದೆ. ಹೀಗಾಗಿ ದಿನಾಂಕ ಮುಂದೂಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ತಿಳಿಸಿದೆ. ಇದನ್ನೂ ಓದಿ: ಹಿಂಸೆ ತಡೆಯೋಕಾಗ್ತಿಲ್ಲ, ಒಂದು ತೊಟ್ಟು ವಿಷ ಕೊಡಿ ಅಂತಾರೆ – ಪವಿತ್ರಾಗೌಡ ಪರ ವಕೀಲರ ಪ್ರಬಲ ವಾದ

