ನವದೆಹಲಿ: ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಮಹಾರಾಷ್ಟ್ರ ಸರ್ಕಾರಕ್ಕೆ ಸಂಬಂಧಿಸಿದ ತೀರ್ಪನ್ನು ನಾಳೆ ಬೆಳಗ್ಗೆ 10.30ಕ್ಕೆ ಕಾಯ್ದಿರಿಸಿದೆ. ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಮತ್ತೊಂದು ದಿನದ ಜೀವದಾನ ಸಿಕ್ಕಂತಾಗಿದೆ.
ನಿನ್ನೆ ಸುಪ್ರೀಂನಲ್ಲಿ ಏನಾಗಿತ್ತು?
ಬಹುಮತ ಇಲ್ಲದಿದ್ದರೂ ಫಡ್ನವಿಸ್ ಸರ್ಕಾರ ರಚನೆಗೆ ಅವಕಾಶ ಕೊಟ್ಟ ರಾಜ್ಯಪಾಲರ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‍ಸಿಪಿ ಪ್ರತ್ಯೇಕವಾಗಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆ ಸೋಮವಾರ ನ್ಯಾ.ಎನ್‍ವಿ ರಮಣ, ಅಶೋಕ್ ಭೂಷಣ್, ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆದಿತ್ತು. ವಿಚಾರಣೆಯಲ್ಲಿ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆ ಮಾಡುವಂತೆ ಆಹ್ವಾನಿಸಿದ ಪತ್ರ ಮತ್ತು ಸರ್ಕಾರ ರಚನೆ ಮಾಡಲು ದೇವೇಂದ್ರ ಫಡ್ನವಿಸ್ ಅವರಿಗೆ ಇರುವ ಅಗತ್ಯ ಸಂಖ್ಯೆಯ ಶಾಸಕರ ಸಹಿಯುಳ್ಳ ಪತ್ರವನ್ನು ಪೀಠದ ಮುಂದೆ ಹಾಜರುಪಡಿಸುವಂತೆ ಪೀಠ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತು.
Advertisement
Mukul Rohatgi representing Maharashtra BJP: Governor in this case has given 14 days for floor test, reasonable time can be 7 days.The most important thing right now is the procedure of Appointment of Protem Speaker, Oath, Election of Speaker, and Agenda.
— ANI (@ANI) November 25, 2019
Advertisement
ಈ ಅರ್ಜಿಯ ವಿಚಾರಣೆ ವೇಳೆ ಅವಕಾಶ ನೀಡಿದರೆ ನಾವೇ ಬಹುಮತ ಸಾಬೀತು ಮಾಡ್ತೇವೆ ಯಾಕೆ ಎಲ್ಲರೂ ತೊಂದರೆ ತೆಗೆದುಕೊಳ್ಳುತ್ತೀರಿ ಎಂದು ಮಹಾರಾಷ್ಟ್ರ ಸರ್ಕಾರದ ಪರವಾಗಿ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು. ಅಷ್ಟೇ ಅಲ್ಲದೇ ಈ ಪ್ರಕರಣ ವಿಚಾರಣೆಗೆ ಅರ್ಹವಲ್ಲ. ಭಾನುವಾರ ರಜೆ ಇದೆ. ಹೀಗಾಗಿ ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಮನವಿ ಮಾಡಿದ್ದರು. ಈ ವೇಳೆ ನ್ಯಾ.ಎನ್‍ವಿ ರಮಣ ಅವರು, ಭಾನುವಾರ ನಮಗೂ ರಜೆ. ಆದರೆ ಮುಖ್ಯ ನ್ಯಾಯಾಧೀಶರು ತುರ್ತು ಅರ್ಜಿ ವಿಚಾರಣೆ ನಡೆಸಬೇಕು ಎಂದು ನಮಗೆ ಸೂಚಿಸಿದ್ದಾರೆ. ಹೀಗಾಗಿ ನಾವು ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದರು.
Advertisement
Court reserves its order to be pronounced tomorrow at 10.30 AM#MahaPoliticalTwist #MaharashtraCrisis #SupremeCourt
— Bar & Bench (@barandbench) November 25, 2019
Advertisement
ಶಿವಸೇನೆ, ಕಾಂಗ್ರೆಸ್, ಎನ್‍ಸಿಪಿ ಪರವಾಗಿ ವಾದ ಮಂಡಿಸಿದ ಕಪಿಲ್ ಸಿಬಲ್, ಕಳೆದ ವರ್ಷ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಒಂದು ದಿನದ ಒಳಗಡೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದನ್ನು ಉಲ್ಲೇಖಿಸಿ, ರಾಜ್ಯಪಾಲರ ನಿರ್ಧಾರ ಸರಿಯಲ್ಲ. ಯಾವ ದಾಖಲೆಗಳು ಇಲ್ಲದೇ ಪ್ರಕ್ರಿಯೆ ಅನುಸರಿಸದೇ ಸರ್ಕಾರ ರಚನೆ ಆಗಿದೆ. ರಾಷ್ಟ್ರಪತಿ ಆಡಳಿತ ತೆರವಿನ ಕೆಲವೇ ಕ್ಷಣಗಳಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಅವರಿಗೆ ಬಹುಮತ ಇದ್ದರೇ ಸಾಬೀತು ಮಾಡಲಿ. ಅವಸರವಾಗಿ ಯಾಕೆ ಪ್ರಮಾಣ ವಚನ ಸ್ವೀಕರಿಸಬೇಕು ಕೂಡಲೇ ಸುಪ್ರೀಂ ಬಹುಮತ ಸಾಬೀತಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದ್ದರು.