ಹುಬ್ಬಳ್ಳಿ: ರಸ್ತೆ ಬದಿಯಲ್ಲಿ ಕುಳಿತಾಗ ಗುರಾಯಿಸಿದ್ದಕ್ಕೆ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ ಇಬ್ಬರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
2020ರ ಮಾರ್ಚ್‍ನಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ ಈ ಘಟನೆ ನಡೆದಿತ್ತು. ಇದೇ ಗಲ್ಲಿಯ ನಿವಾಸಿಗಳಾದ ಶಂಶುದ್ದೀನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಎಂಬುವವರು ರಸ್ತೆ ಬದಿಯಲ್ಲಿ ಕುಳಿತಿದ್ದರು. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್
Advertisement
Advertisement
ಈ ವೇಳೆ ಶಾಬುದ್ದಿನ್ ಇಬ್ಬರಮನ್ನು ಗುರಾಯಿಸಿದ್ದ. ಈ ಕಾರಕ್ಕೆ ಶಂಶುದ್ದೀನ್ ಮತ್ತು ಅಹ್ಮದ್ ಇಬ್ಬರು ಸೇರಿ ಶಾಬುದ್ದಿನ್‍ಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಅರ್ಧ ಮನೆಯೇ ಧ್ವಂಸ
Advertisement
Advertisement
ಇಬ್ಬರ ಆರೋಪ ಸಾಬೀತಾಗಿದ್ದು, 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು, ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ ತಲಾ 1.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದೇ ಇದ್ದಲ್ಲಿ ಇನ್ನೂ 2 ವರ್ಷ ಕಾರಾಗೃಹ ಶಿಕ್ಷೆ ಮುಂದುವರಿಸುವಂತೆ, ಜೊತೆಗೆ ದಂಡದ ಮೊತ್ತದಲ್ಲಿ 1.45 ಲಕ್ಷ ಹಣವನ್ನು ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ.