ತೆಲುಗಿನ ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಅವರಿಗೆ ಕೋರ್ಟ್ ಶಾಕ್ ನೀಡಿದೆ. ಪಲ್ಲವಿ ಪ್ರಶಾಂತ್ ಸಲ್ಲಿಸಿದ್ದ ಜಾಮೀನು (Bail) ಅರ್ಜಿಯನ್ನು ನಾಂಪಲ್ಲಿ ನ್ಯಾಯಾಲಯ ತಿರಸ್ಕರಿಸಿದೆ. ವಿಧ್ವಂಸಕ ಕೃತ್ಯ ಹಾಗೂ ಅಶಾಂತಿಗೆ ಕಾರಣ ಆಗಿದ್ದಾರೆ ಎನ್ನುವ ಕಾರಣಕ್ಕಾಗಿ ತೆಲುಗಿನ ಬಿಗ್ ಬಾಸ್ ಸೀಸನ್ 7 ರ ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪೊಲೀಸರು ಬಂಧಿಸಿದ್ದರು. (Arrest). ಪಲ್ಲವಿ ಪ್ರಶಾಂತ್ ಅವರ ಜೊತೆಗೆ ಸಹೋದರ ಮನೋಹರ್ ಅವರನ್ನು ಕೂಡ ಬಂಧಿಸಲಾಗಿತ್ತು. ನ್ಯಾಯಾಲಯವು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
Advertisement
ಏನಿದು ಪ್ರಕರಣ?
Advertisement
ಬಿಗ್ ಬಾಸ್ (Bigg Boss) ಕಂಟೆಸ್ಟೆಂಟ್ ಅಭಿಮಾನಿಗಳು ಕಿತ್ತಾಡಿಕೊಂಡ ಪ್ರಕರಣ ಹೈದರಾಬಾದ್ ನಲ್ಲಿ ಮೊನ್ನೆ ನಡೆದಿತ್ತು. ಫಿನಾಲೆ ವೇಳೆ ಸ್ಟುಡಿಯೋದಲ್ಲಿ ಗಲಾಟೆ ನಡೆದಿದ್ದು, ಕಾರು ಮತ್ತು ಬಸ್ ಗಳು ಜಖಂ ಆಗಿದ್ದವು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್ (Amar Deep) ಮತ್ತು ಪಲ್ಲವಿ ಪ್ರಶಾಂತ್ (Pallavi Prashant) ಅವರ ಅಭಿಮಾನಿಗಳು ಆಗಮಿಸಿ ದಾಂಧಲೆ ಮಾಡಿದ್ದರು.
Advertisement
Advertisement
ಗ್ರ್ಯಾಂಡ್ ಫಿನಾಲೆಯಲ್ಲಿ ತಮ್ಮ ನೆಚ್ಚಿನ ಕಂಟೆಸ್ಟೆಂಟ್ ವಿನ್ನರ್ ಆಗುತ್ತಾರೆ ಎನ್ನುವುದು ಅವರವರ ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ, ಆಗಿದ್ದು ಉಲ್ಟಾ ಎನ್ನುವ ಕಾರಣಕ್ಕಾಗಿ ಗಲಾಟೆ ಶುರುವಾಗಿತ್ತು. ಪಲ್ಲವಿ ಪ್ರಶಾಂತ್ ವಿನ್ ಆಗಿ, ಅಮರ್ ದೀಪ್ ರನ್ನರ್ ಅಪ್ ಆಗಿ ಘೋಷಣೆ ಆಗುತ್ತಿದ್ದಂತೆಯೇ ಗಲಾಟೆ ಶುರುವಾಗಿತ್ತು. ಇಬ್ಬರ ಫ್ಯಾನ್ಸ್ ಮಾತು ವಿಕೋಪಕ್ಕೆ ಹೋದ ಕಾರಣದಿಂದಾಗಿ ಆರ್.ಟಿ.ಸಿ ಬಸ್ ಮತ್ತು ಕಾರಿನ ಗಾಜು ಪುಡಿ ಪುಡಿ ಆಗಿದೆ.
ಪಲ್ಲವಿ ಪ್ರಶಾಂತ್ ಅಭಿಮಾನಿಗಳು ರನ್ನರ್ ಅಪ್ ಆಗಿದ್ದ ಅಮರ್ ಅವರ ಕಾರಿನ ಮೇಲೂ ದಾಳಿ ಮಾಡಿದ್ದರು. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಅನಾಹುತ ಆಗಿರುವುದನ್ನು ತಡೆದಿದ್ದರು. ಜೊತೆ ಇನ್ನೋರ್ವ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಶ್ರೀ ಅವರು ಕಾರಿನ ಗಾಜು ಪುಡಿ ಪುಡಿ ಆಗಿತ್ತು. ಈ ಕುರಿತಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ.