ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ’ ಚಿತ್ರದ ಬಗ್ಗೆ ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಆ ಸಿನಿಮಾದಲ್ಲಿ ತಮ್ಮ ಮಾನಹಾನಿ ಮಾಡುವಂತಹ ಅಂಶಗಳು ಇವೆ. ಹಾಗಾಗಿ ಓಟಿಟಿಯಲ್ಲಿರುವ ಚಿತ್ರವನ್ನು ತೆಗೆದು ಹಾಕಬೇಕು ಎಂದು ರಮ್ಯಾ ಅರ್ಜಿ ಸಲ್ಲಿಸಿದ್ದರು. ಈ ವಿಷಯದಲ್ಲಿ ನರೇಶ್ ಪರ ತೀರ್ಪು ಬಂದಿತ್ತು. ಅಲ್ಲದೇ, ರಮ್ಯಾ ಅವರು ನಮ್ಮ ಮನೆಗೆ ಬಂದು ತೊಂದರೆ ನೀಡುತ್ತಿದ್ದಾರೆ. ಅವರು ಮನೆಗೆ ಬಾರದಂತೆ ನಿರ್ದೇಶನ ನೀಡಬೇಕು ಎಂದು ನರೇಶ್ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಇದರಲ್ಲೂ ನರೇಶ್ ಗೆ ಜಯ ಸಿಕ್ಕಿತ್ತು.
Advertisement
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ನರೇಶ್, ‘ನ್ಯಾಯಕ್ಕೆ ಜಯ ಸಿಕ್ಕಿದೆ. ರಮ್ಯಾ ಜೊತೆಗಿನ ಡಿವೋರ್ಸ್ ಗೆ ಈ ತೀರ್ಪು ಸಹಾಯಕ್ಕೆ ಬರುತ್ತದೆ. ಆದಷ್ಟು ಬೇಗ ಆಕೆಯಿಂದ ದೂರವಾಗಿ ಪವಿತ್ರಾ ಅವರ ಜೊತೆ ನೆಮ್ಮದಿಯಾಗಿ ಬದುಕುವೆ. ರಮ್ಯಾ ಸಾಕಷ್ಟು ಸಾಲ ಮಾಡಿಕೊಂಡಿದ್ದರಿಂದ ಸಾಲಗಾರರು ಮನೆಗೆ ಬರುತ್ತಿದ್ದರು. ಹಾಗಾಗಿ ನಮ್ಮ ಕುಟುಂಬ ಕೋರ್ಟಿಗೆ ಅರ್ಜಿ ಸಲ್ಲಿಸಬೇಕಾಯಿತು ಎಂದಿದ್ದಾರೆ.
Advertisement
Advertisement
ಏನಿದು ಪ್ರಕರಣ?
Advertisement
ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ (Naresh) ಮತ್ತು ನಟಿ ಪವಿತ್ರಾ ಲೋಕೇಶ್ (Pavitra Lokesh) ಸಿನಿಮಾ ಮಾಡಿದ್ದಾರೆ. ಅದು ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಈ ಹಿಂದೆ ಸಿನಿಮಾ (Matte Maduve ) ರಿಲೀಸ್ ವೇಳೆಯೂ ರಮ್ಯಾ ಇದೇ ರೀತಿಯಲ್ಲಿ ತಡೆಯಾಜ್ಞೆ ತರುವ ಪ್ರಯತ್ನ ಮಾಡಿದ್ದರು. ಸಿನಿಮಾದ ಕಥೆಯು ತಮ್ಮ ಜೀವನದ ಅನೇಕ ಘಟನೆಗಳನ್ನು ಹೋಲುತ್ತದೆ. ಹಾಗಾಗಿ ಚಿತ್ರವು ರಿಲೀಸ್ ಆಗಬಾರದು ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆಗಲೂ ಕೂಡ ರಮ್ಯಾಗೆ (Ramya Raghupathi) ಹಿನ್ನೆಡೆಯಾಗಿತ್ತು. ಸಿನಿಮಾದಲ್ಲಿ ಕಾಲ್ಪನಿಕ ಕಥೆಯಂದು ಹಾಕಲಾಗಿದೆ. ಸೆನ್ಸಾರ್ ಮಂಡಳಿ ಕೂಡ ಅದಕ್ಕೆ ಒಪ್ಪಿ ಪತ್ರ ಕೊಟ್ಟಿದೆ ಎಂದು ಕೋರ್ಟ್ (Court) ಅಭಿಪ್ರಾಯ ಪಟ್ಟಿತ್ತು.
ಜೂನ್ 23 ರಿಂದ ಮತ್ತೆ ಮದುವೆ ಸಿನಿಮಾ ಪ್ರತಿಷ್ಠಿತ ಒಟಿಟಿ (OTT) ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗುತ್ತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು.
ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಇದನ್ನೂ ಓದಿ:ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ನಿರ್ಮಾಪಕ ಅನುರಾಗ್ ಕಶ್ಯಪ್ ಪುತ್ರಿ ಆಲಿಯಾ
ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.
ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ ನಲ್ಲಿ ನೋಡಬಹುದು.
Web Stories