ಮುಂಬೈ: ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರ ವಿರುದ್ಧ 5ಜಿ ತಂತ್ರಜ್ಞಾನದ ಬಿಡುಗಡೆಗೆ ಸಂಬಂಧಿಸಿದಂತೆ 20 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಈಗ ಹೈಕೋರ್ಟ್ 2 ಲಕ್ಷಕ್ಕೆ ಇಳಿಸಿದೆ.
ಭಾರತದಲ್ಲಿ 5ಜಿ ಅಳವಡಿಕೆ ವಿರುದ್ಧದ ಮೊಕದ್ದಮೆಗಾಗಿ ನಟಿ ಜೂಹಿ ಚಾವ್ಲಾ ಅವರಿಗೆ ವಿಧಿಸಲಾಗಿದ್ದ ದಂಡವನ್ನು 20 ಲಕ್ಷದಿಂದ 2 ಲಕ್ಷಕ್ಕೆ ಇಳಿಸಲು ದೆಹಲಿ ಹೈಕೋರ್ಟ್ ಮುಂದಾಗಿದೆ. ಆದರೆ ಅವರು ಸಾರ್ವಜನಿಕರಿಗಾಗಿ ಒಂದಿಷ್ಟು ಸೇವೆ ಮಾಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ನ್ಯಾಯಾಂಗದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಜೂಹಿ ಚಾವ್ಲಾ ಸೇರಿದಂತೆ ಇತರ ಇಬ್ಬರ ಮೇಲೆ ದಂಡ ವಿಧಿಸಿದೆ. ಇದನ್ನೂ ಓದಿ: 5ಜಿ ವಿರುದ್ಧ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿ ವಜಾ- 20 ಲಕ್ಷ ದಂಡ ವಿಧಿಸಿದ ದೆಹಲಿ ಹೈ ಕೋರ್ಟ್
ಏನಿದು 5ಜಿ?
2021ರ ಜೂನ್ 4 ರಂದು, ಭಾರತದಲ್ಲಿ 5ಜಿ ತಂತ್ರಜ್ಞಾನದ ರೋಲ್ ಔಟ್ ವಿರುದ್ಧ ಜೂಹಿ ಚಾವ್ಲಾ ಅವರ ಸಿವಿಲ್ ಮೊಕದ್ದಮೆಯನ್ನು ನ್ಯಾಯಮೂರ್ತಿ ಜೆ.ಆರ್.ಮಿಧಾ ವಜಾಗೊಳಿಸಿದರು. ಈ ವೇಳೆ ಫಿರ್ಯಾದಿದಾರರ ಮೇಲೆ 20 ಲಕ್ಷ ರೂ. ದಂಡ ವಿಧಿಸಿದರು. ಪ್ರಚಾರಕ್ಕಾಗಿ ಈ ರೀತಿಯ ಮೊಕದ್ದಮೆ ಮಾಡಲಾಗಿದೆ ಎಂದು ನ್ಯಾಯಾಲಯವು ಕಳೆದ ವರ್ಷ ತಿಳಿಸಿತ್ತು.
ಈ ಹಿನ್ನೆಲೆ ನಟಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ್ದು, ಮೊಕದ್ದಮೆಯನ್ನು ವಜಾಗೊಳಿಸುವ ಏಕ ಪೀಠದ ಆದೇಶವು ಸರಿಯಿಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದರು. ಆದರೆ ಕಳೆದ ವರ್ಷ ಕೊರೊನಾ 2ನೇ ಅಲೆ ಇದ್ದ ಕಾರಣ ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯದ ತಡೆದಿತ್ತು. ಆದರೂ ಈ ವಿಚಾರಣೆಗೆ ಜೂಹಿ ಚಾವ್ಲಾ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜಾರಾಗುತ್ತಿದ್ದರು. ಇದನ್ನೂ ಓದಿ: ನಾನು 5ಜಿ ವಿರೋಧಿ ಅಲ್ಲ, ಅದರ ಸಮಸ್ಯೆಗಳನ್ನು ತಡೆಯಬೇಕು: ಜೂಹಿ ಚಾವ್ಲಾ
Hum…tum aur 5G! ????????
If you do think this concerns you in anyway, feel free to join our first virtual hearing conducted at Delhi High Court, to be held on 2nd June, 10.45 AM onwards ???? Link in my bio. https://t.co/dciUrpvrq8
— Juhi Chawla Mehta (@iam_juhi) June 1, 2021
ಅರ್ಜಿಯನ್ನು ವಜಾಗೊಳಿಸಿದ ನಂತರ, ಜೂಹಿ ಚಾವ್ಲಾ ಅವರು ಕೆಲವು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವೀಡಿಯೋದಲ್ಲಿ, ನಾನು 5ಜಿ ತಂತ್ರಜ್ಞಾನದ ವಿರುದ್ಧವಲ್ಲ. ಈ ತಂತ್ರಜ್ಞಾನವು ಸುರಕ್ಷಿತವಾಗಿದೆ ಎಂದು ಸರ್ಕಾರದ ಸ್ಪಷ್ಟೀಕರಣವನ್ನು ಪಡೆಯಲು ಮಾತ್ರ ಅರ್ಜಿ ಹಾಕಲಾಗಿತ್ತು ಎಂದು ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹೇಳಿದ್ದರು.