ನವದೆಹಲಿ: ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಲಸಿಕೆಯು ಶೇ. 50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಅಧ್ಯಯನದ ವರದಿ ತಿಳಿಸಿದೆ.
ವರದಿಯ ಮಾಹಿತಿಯನ್ನು ಲ್ಯಾನ್ಸೆಟ್ ಇನ್‌ಫೆಕ್ಷಿಯಸ್ ಡಿಸೀಸ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳು ಶೇ. 77.8 ರಷ್ಟು ಪರಿಣಾಮಕಾರಿಯಾಗಿದೆ. ಲಸಿಕೆ ಸುರಕ್ಷತೆ ಬಗ್ಗೆ ಯಾವುದೇ ಆತಂಕವಿಲ್ಲ ಎಂದು ವರದಿ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ
Advertisement
Advertisement
ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ಏಮ್ಸ್) 2,714 ಸಿಬ್ಬಂದಿಯನ್ನು ಏ.15ರಿಂದ ಮೇ 15ರವರೆಗೆ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿತ್ತು.
Advertisement
ಡೆಲ್ಟಾ ರೂಪಾಂತರವು ಭಾರತದಲ್ಲಿ ಪ್ರಬಲವಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ ಶೇ 80ರಷ್ಟು ಡೆಲ್ಟಾ ರೂಪಾಂತರ ಸಂಬಂಧಿತ ಪ್ರಕರಣಗಳಾಗಿದ್ದವು ಎಂದು ಸಂಶೋಧಕರು ಅಧ್ಯಯನದ ಸಂದರ್ಭದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ
Advertisement
ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಹಾಗೂ ರಾಷ್ಟ್ರೀಯ ವೈರಾಣು ಸಂಸ್ಥೆ ಸಹಯೋಗದಲ್ಲಿ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ಭಾರತದ 18 ವಯಸ್ಸು ಮೇಲ್ಪಟ್ಟವರಿಗೆ ತುರ್ತು ಬಳಕೆಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಬಹುದು ಎಂದು ಅನುಮೋದನೆ ನೀಡಲಾಗಿತ್ತು. ಅಂತೆಯೇ ಈ ತಿಂಗಳು ಕೋವ್ಯಾಕ್ಸಿನ್ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯೂ ಅನುಮೋದಿಸಿದೆ.