ನವದೆಹಲಿ: ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ನೀಡಲು ತಜ್ಞರ ಸಮಿತಿ ಅನುಮತಿ ನೀಡಿದೆ.
ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ತುರ್ತು ಬಳಕೆಗೆ ಒಪ್ಪಿಗೆ ಸಿಕ್ಕಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇದೀಗ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ಸಿಕ್ಕಿರುವುದು ಸಮಾಧಾನಕರ ಸಂಗತಿಯಾಗಿದೆ. ಇದನ್ನೂ ಓದಿ: ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಅಂತ್ಯ – ಶೀಘ್ರದಲ್ಲಿ ಡಿಸಿಜಿಐಗೆ ವರದಿ ಸಲ್ಲಿಕೆ
Advertisement
Advertisement
ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್‍ನ ಕೋವ್ಯಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್(Indian Council of Medical Research) ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಆಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ- ಮೈಸೂರಲ್ಲಿ 30 ಚಿಣ್ಣರರಿಗೆ ಕೋವ್ಯಾಕ್ಸಿನ್
Advertisement
Advertisement
ಮಕ್ಕಳಿಗೆ ಕೋವ್ಯಾಕ್ಸಿನ್ ನೀಡುವ ಬಗ್ಗೆ ಒಂದು ವಾರದ ಹಿಂದೆ ಕ್ಲಿನಿಕಲ್ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಲಾಗಿತ್ತು. ಈ ವರದಿ 1, 2 ಮತ್ತು 3ನೇ ಹಂತದ ಕ್ಲಿನಿಕಲ್ ಪರೀಕ್ಷೆಯ ವಿವರ, ಫಲಿತಾಂಶವನ್ನು ಒಳಗೊಂಡಿತ್ತು. ಸೆ. 21ರಂದು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ 3ನೇ ಹಂತದ ಪ್ರಯೋಗ ಪೂರ್ಣಗೊಂಡಿತ್ತು. ಒಟ್ಟು 1,000 ಮಕ್ಕಳ ಮೇಲೆ ಪ್ರಯೋಗ ನಡೆಸಲಾಗಿತ್ತು. ಇದನ್ನೂ ಓದಿ: ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ
ಸ್ಪಷ್ಟನೆ: ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮಾತುಕತೆ ನಡೆಯುತ್ತಿದೆ. 2-18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಡಿಸಿಜಿಐ ಇನ್ನೂ ಅನುಮತಿ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಡಾ. ಭಾರತಿ ಪ್ರವೀಣ್ ಸ್ಪಷ್ಟನೆ ನೀಡಿದ್ದಾರೆ.
The evaluation is still going on. There is some confusion & the talks are underway with the experts' committee. Till now Drugs Controller General of India (DCGI) hasn't approved it: MoS Health, Dr Bharati Pravin Pawar on approval to Covaxin for 2-18 years age group pic.twitter.com/OKb3AJDaOQ
— ANI (@ANI) October 12, 2021
ಭಾರತ ಮೂಲದ ಜೈಡಸ್ ಕ್ಯಾಡಿಲಾ (Zydus Cadila) ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ (ZyCov-D Vaccine) ತುರ್ತು ಬಳಕೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಮೂರು ಡೋಸ್‍ಗಳನ್ನು ಹೊಂದಿರುವ ಈ ಲಸಿಕೆಯನ್ನು ಅಕ್ಟೋಬರ್ ಬಳಿಕ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡುವ ಸಾಧ್ಯತೆಯಿದೆ. ಮುಖ್ಯವಾಗಿ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎನ್ನಲಾಗಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ.
ಐಸಿಎಂಆರ್ ನಡೆಸಿದ ಸರ್ವೇಯಲ್ಲಿ, ದೇಶದಲ್ಲಿ ಸುಮಾರು ಶೇ.60 ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮಕ್ಕಳಲ್ಲಿ ಸೋಂಕಿನಿಂದ ಮರಣ ಪ್ರಮಾಣ ದಶಲಕ್ಷದಲ್ಲಿ ಎರಡು ಆಗಿದೆ. ಇದು ಅತಿ ಕನಿಷ್ಠವಾಗಿದೆ. ಭಾರತ್ ಬಯೋಟೆಕ್‍ನ ಕೋವ್ಯಾಕ್ಸಿನ್ ಲಸಿಕೆಯು ವಯಸ್ಕರಂತೆಯೇ ಮಕ್ಕಳಲ್ಲಿ ಕೂಡ ಪರಿಣಾಮ ತೋರುತ್ತದೆ. ಲಸಿಕೆಯ ಸುರಕ್ಷತೆ ಹಾಗೂ ರೋಗನಿರೋಧಕ ಶಕ್ತಿ ಮಕ್ಕಳಲ್ಲಿಯೂ ವಯಸ್ಕರಂತೆಯೇ ಇರಲಿದೆ ಎಂದು ಎಂದು ಏಮ್ಸ್ ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್ ಪ್ರೊಫೆಸರ್ ಡಾ. ಸಂಜಯ್ ಕೆ ರೈ ತಿಳಿಸಿದ್ದಾರೆ.
ಕೋವ್ಯಾಕ್ಸಿನ್ ಲಸಿಕೆಯನ್ನು ಮೂರು ವಯೋಮಾನದವರಲ್ಲಿ ನಡೆಸಲಾಗಿದೆ. ಮೊದಲು 12-18 ವಯೋಮಾನದವರಲ್ಲಿ, ಎರಡನೆಯದಾಗಿ 6-12 ವಯೋಮಾನ ಹಾಗೂ ಮೂರನೆಯದಾಗಿ 2-6 ವಯೋಮಾನದವರಲ್ಲಿ ಲಸಿಕೆ ಪ್ರಯೋಗ ನಡೆಸಲಾಗಿದೆ. ಈ ಪ್ರಯೋಗಗಳಲ್ಲಿ ಕೋವ್ಯಾಕ್ಸಿನ್ ವಯಸ್ಕರಂತೆಯೇ ಮಕ್ಕಳ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.